ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ : ಜಗದೀಶ್ ಶೆಟ್ಟರ್ – vishwanews24

Featured, ರಾಜ್ಯ ನ್ಯೂಸ್

ಗ್ಯಾರಂಟಿ ಯೋಜನೆಗಳ ಪರಿಣಾಮ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ : ಜಗದೀಶ್ ಶೆಟ್ಟರ್

ಬೆಳಗಾವಿ: ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಚಾಲನೆ ನೀಡಲಾಗಿದ್ದ ಕಾಮಗಾರಿಗಳೇ ಈಗ ಮುಂದುವರಿದಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

ಬೆಳಗಾವಿಯಲ್ಲಿ ಸೋಮವಾರ (ಏ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಇದ್ದಾಗ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಟೀಕೆ ಮಾಡುತ್ತಾರೆ. ನೀವು ಆರ್ಥಿಕ ತಜ್ಞರು ಮತ್ತು ದಾಖಲೆಯ ಬಜೆಟ್‌ ಮಂಡಿಸಿದ್ದೇನೆ ಎಂದು ಹೇಳುತ್ತೀರಿ. ಹಾಗಿದ್ದರೆ ನೀವು ಆರ್ಥಿಕ ಸ್ಥಿತಿ ಸರಿಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದರು.

ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಮುಸ್ಲಿಮರಿಗೆ ನೀಡಲಾಗಿದೆ : ಕಾಂಗ್ರೆಸ್ ವಿರುದ್ಧ ಪ್ರಧಾನಿ ವಾಗ್ದಾಳಿ  – vishwanews24

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವರ ಹಸ್ತಕ್ಷೇಪದಿಂದ ನರೇಗಾ ಕಾಮಗಾರಿಗಳು ವಿಳಂಬವಾಗುತ್ತಿವೆ. ಮಾರ್ಚ್ 31 ರೊಳಗೆ ನರೇಗಾ ಕಾಮಗಾರಿಯ ಕ್ರಿಯಾ ಯೋಜನೆ ಸಿದ್ಧವಾಗಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದೆಲ್ಲದರ ಬಗ್ಗೆ ದಾಖಲೆ ಕೊಡುತ್ತೇನೆ. ಕೆಲವು ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಇದೆ ಎಂಬ ಕಾರಣಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಶೆಟ್ಟರ್ ಹೇಳಿದರು.

Leave a Reply