ಬೆಳಗಾವಿ: ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ನಿಂತುಹೋಗಿವೆ. ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಚಾಲನೆ ನೀಡಲಾಗಿದ್ದ ಕಾಮಗಾರಿಗಳೇ ಈಗ ಮುಂದುವರಿದಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಸೋಮವಾರ (ಏ.14) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರಕಾರ ಇದ್ದಾಗ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮುಖ್ಯಮಂತ್ರಿ ಟೀಕೆ ಮಾಡುತ್ತಾರೆ. ನೀವು ಆರ್ಥಿಕ ತಜ್ಞರು ಮತ್ತು ದಾಖಲೆಯ ಬಜೆಟ್ ಮಂಡಿಸಿದ್ದೇನೆ ಎಂದು ಹೇಳುತ್ತೀರಿ. ಹಾಗಿದ್ದರೆ ನೀವು ಆರ್ಥಿಕ ಸ್ಥಿತಿ ಸರಿಮಾಡಬಹುದಿತ್ತು. ಏಕೆ ಮಾಡಲಿಲ್ಲ ಎಂದರು.
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಚಿವರ ಹಸ್ತಕ್ಷೇಪದಿಂದ ನರೇಗಾ ಕಾಮಗಾರಿಗಳು ವಿಳಂಬವಾಗುತ್ತಿವೆ. ಮಾರ್ಚ್ 31 ರೊಳಗೆ ನರೇಗಾ ಕಾಮಗಾರಿಯ ಕ್ರಿಯಾ ಯೋಜನೆ ಸಿದ್ಧವಾಗಿದ್ದರೂ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ. ಇದೆಲ್ಲದರ ಬಗ್ಗೆ ದಾಖಲೆ ಕೊಡುತ್ತೇನೆ. ಕೆಲವು ಗ್ರಾಮ ಪಂಚಾಯತ್ ಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಇದೆ ಎಂಬ ಕಾರಣಕ್ಕೆ ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಶೆಟ್ಟರ್ ಹೇಳಿದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…