ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರವನ್ನು ತಮ್ಮದಾಗಿಸಿಕೊಳ್ಳಲು ಉತ್ಸುಕರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಲೋಕಸಭೆ ಚುನಾವಣೆಗೆ ಒಟ್ಟಾಗಿ ಕಣಕ್ಕಿಳಿದಿರುವ ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿದರು.
ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದ್ದ ಹೆಚ್’ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ವಿರುದ್ಧ ಮುಖ್ಯಮಂತ್ರಿಗಳು ಕಿಡಿಕಾರಿದರು.
ನಮ್ಮ ವಿರೋಧಿಗಳು ಐದು ಗ್ಯಾರಂಟಿ ಘೋಷಣೆ ಮಾಡಿದಾಗ ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ಈಗ ರಾಜ್ಯ ಸುಭದ್ರವಾಗಿದೆ. ಕಳೆದ ಭಾರಿ ಬಜೆಟ್‍ಗಿಂತ 46 ಸಾವಿರ ಕೋಟಿ ರೂ. ಹೆಚ್ಚಾಗಿದೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮಾನ ನೀಡಲಿದ್ದಾರೆ. 20 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತಾರೆಂದು ಹೇಳಿದರು.
ರಾಜ್ಯದಲ್ಲಿ ಈಗ ಇರುವದು ಒಂದೇ ವಿರೋಧ ಪಕ್ಷ, ಜೆಡಿಎಸ್ ಬಿಜೆಪಿಯೊಂದಿಗೆ ವಿಲೀನಗೊಂಡು ಕೇಸರಿ ಪಕ್ಷದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮನಾಗಿ ಮರುಹುಟ್ಟು ಪಡೆಯಬೇಕೆಂದು ಹಿಂದೊಮ್ಮೆ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಅವರು, ಇದೀಗ ಕೋಮುವಾದಿ ಪಕ್ಷ ಬಿಜೆಪಿ ಜೊತೆ ಕೈಜೋಡಿಸಿದ್ದಾರೆ. ಪಕ್ಷದ ಜಾತ್ಯಾತೀತ ಪದವನ್ನು ಮರೆದು ಮೋದಿಯವರನ್ನು ಕೊಂಡಾಡುತ್ತಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ 39ರಿಂದ 19 ಸ್ಥಾನಕ್ಕೆ ಕುಸಿದು ಮುಂದಿನ ಚುನಾವಣೆ ವೇಳೆಗೆ ರಾಜ್ಯ ರಾಜಕಾರಣದಿಂದ ಕಣ್ಮರೆಯಾಗುವ ಭೀತಿಯಿಂದಾಗಿ ಜೆಡಿಎಸ್ ಬಿಜೆಪಿ ಜತೆ ಕೈಜೋಡಿಸಿದೆ ಎಂದು ತಿಳಿಸಿದರು.
ಇದೇ ವೇಳೆ ಬಜೆಟ್ ಕುರಿತು ವಿಪಕ್ಷಗಳ ಟೀಕೆ ಕುರಿತು ಮಾತನಾಡಿ, ಬಡವರ ವಿರುದ್ಧ ಇರುವವರು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯನ್ನು ಕಲ್ಪಿಸಿರುವ ಬಜೆಟ್ ಅನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಕೇಂದ್ರವು ರಾಜ್ಯದ ಪಾಲಿನ 1.87 ಲಕ್ಷ ಕೋಟಿ ರೂ.ಗಳನ್ನು ನಮಗೆ ನೀಡಿದರೆ ನಾವು ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಮಳವಳ್ಳಿಯಲ್ಲಿ 370 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಹಿಡಿದು ಬಿಜೆಪಿ-ಜೆಡಿಎಸ್ ಪಕ್ಷಳ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮಳವಳ್ಳಿ ಮತ್ತು ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ವಿರೋಧ ಪಕ್ಷಗಳ ಕೊಡುಗೆ ಏನು? ನಾವು ಅವರಂತೆ ಕೊಟ್ಟ ಮಾತನ್ನು ಉಳಿಸಿಕೊಳ್ಳಂತೆ ನಡೆಯುವುದಿಲ್ಲ. ಹಿಂದಿನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ 165 ಭರವಸೆಗಳ ಪೈಕಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಈ ಬಾರಿ ಪಕ್ಷವು ಎಲ್ಲಾ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯಲಾಗುತ್ತದೆ ಎಂದು ತಿಳಿಸಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…