Featured

ಗ್ಯಾರಂಟಿ ಸಮಾವೇಶ ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮ :ಯು.ಟಿ. ಖಾದರ್‌ – Vishwanews24

ಗ್ಯಾರಂಟಿ ಸಮಾವೇಶ ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮ :ಯು.ಟಿ. ಖಾದರ್‌

ಮೂಲ್ಕಿ: ಪಂಚ ಗ್ಯಾರಂಟಿಗಳಿಂದ ಬಡ ಜನರಿಗೆ ಹೆಚ್ಚಿನ ಪ್ರಯೋಜನವಾಗಿರುವ ಜೊತೆಗೆ ಹಣಕಾಸಿನ ಚಲಾವಣೆಯಿಂದಾಗಿ ರಾಜ್ಯ ಸರ್ಕಾರವು ಅತಿ ಹೆಚ್ಚು ಜಿಎಸ್‌ಟಿ ನೀಡುವ ಎರಡನೇ ರಾಜ್ಯವಾಗಿ ಪರಗಣಿಸಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಹೇಳಿದರು. ಮೂಲ್ಕಿ ಗಾಂಧಿ ಮೈದಾನದಲ್ಲಿ ಮೂಲ್ಕಿ ತಾಲೂಕು ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

ಗ್ಯಾರಂಟಿ ಸಮಾವೇಶವು ಬಡ ಜನರ ಸಂತೋಷವನ್ನು ಆಚರಿಸುವ ಕಾರ್ಯಕ್ರಮವಾಗಿದ್ದು ಆಡಳಿತ ಪಕ್ಷವು ಉತ್ತಮ ಆಡಳಿತವನ್ನು ನೀಡುವ ಕಾರ್ಯ ಮಾಡಬೇಕು.

ವಿಪಕ್ಷವು ಆಡಳಿತ ಪಕ್ಷದ ನ್ಯೂನತೆಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಿದಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಐದು ಗ್ಯಾರಂಟಿ ಯೋಜನೆಗಳನ್ನು ನೀಡಿ ಬಡ ವರ್ಗಕ್ಕೆ ಸಹಕಾರ ನೀಡುವ ಜೊತೆಗೆ ರೈತರಿಗೆ ಬೆಂಬಲ ಬೆಲೆ ನೀಡಿದ ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ ಎಂದರು.

ಈ ಸಂದರ್ಭ ಐದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಂದ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ನಾಡು ಸಿಎಸ್‌ಐ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು. ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ದ.ಕ. ಜಿಲ್ಲಾಧಿಕಾರಿ ಮುಲೈಮುಗಿಲನ್, ಸಹಾಯಕ ಆಯುಕ್ತ ಹರ್ಷವರ್ದನ್, ಜಿಲ್ಲಾ ಪಂಚಾಯಿತಿ ಸಿಇಒ ಆನಂದ್, ಮೂಲ್ಕಿ ತಾಲೂಕು ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, ಆರ್‌ಟಿಒ ಶ್ರೀಧರ್, ಸಿಡಿಪಿಒ ಶೈಲಾ, ಮಿಥುನ್ ರೈ ಮತ್ತಿತರರಿದ್ದರು. ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ನವೀನ್ ಶೆಟ್ಟಿ ಎಡ್ಮೆಮಾರ್ ನಿರೂಪಿಸಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago