ಮಾಗಡಿ: ಸ್ನಾನಕ್ಕೆಂದು ತೆರಳಿದ್ದ ವೇಳೆ ಗ್ಯಾಸ್ ಗೀಸರ್ ನ ವಿಷಕಾರಿ ಕಾರ್ಬನ್ ಮೊನಾಕ್ಸೈಡ್ ಸೋರಿಕೆಯಿಂದಾಗಿ ಮಗ ಮತ್ತು ರಕ್ಷಣೆಗೆ ತೆರಳಿದ್ದ ತಾಯಿ ಮೃತಪಟ್ಟಿದ್ದಾರೆ.
ಮೃತರನ್ನು ಶೋಭಾ (40) ಮತ್ತು ಅವರ ಪುತ್ರ ದಿಲೀಪ್ (17) ಎಂದು ಗುರುತಿಸಲಾಗಿದೆ. ರಾತ್ರಿ ಏಳು ಗಂಟೆ ಸುಮಾರಿಗೆ ದಿಲೀಪ್ ಸ್ನಾನದ ಕೊಠಡಿಯಲ್ಲಿರುವ ಗೀಸರ್ ಸ್ವಿಚ್ ಆನ್ ಮಾಡಿಕೊಂಡು ಸ್ನಾನಕ್ಕೆ ತೆರಳಿದ್ದರು. ಆಗ, ಕಿಟಕಿ ಇಲ್ಲದ ಕೊಠಡಿಯನ್ನು ಆವರಿಸಿದ ಕಾರ್ಬನ್ ಮೊನಾಕ್ಸೈಡ್ ನಿಂದಾಗಿ ದಿಲೀಪ್ ಪ್ರಜ್ಞೆ ತಪ್ಪಿ ಮೃತಪಟ್ಟಿದ್ದಾರೆ.
ಸ್ನಾನಕ್ಕೆ ಹೋದ ಮಗ ಎಷ್ಟೊತ್ತಾದರೂ ಬಂದಿಲ್ಲ ಎಂದು ತಾಯಿ ಶೋಭಾ ಅವರು, ಸ್ನಾನದ ಕೊಠಡಿ ಬಾಗಿಲು ತೆರೆದು ಒಳ ಹೋದಾಗ ಮಗ ಕೆಳಗೆ ಬಿದ್ದಿರುವುದನ್ನು ಗಮನಿಸಿದ್ದಾರೆ. ಆತನ ಸ್ಥಿತಿ ಕಂಡು ಗಾಬರಿಗೊಂಡು ಅವರ, ಮಗನನ್ನು ಹೊರಕ್ಕೆ ಕರೆತರಲು ಯತ್ನಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ಅವರು ಸಹ ಅನಿಲ ಸೇವಿಸಿ ಪ್ರಜ್ಞೆ ತಪ್ಪಿ ಕೊನೆಯುಸಿರೆಳೆದಿದ್ದಾರೆ. ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…