ಗ್ಯಾಸ್ ಸಿಲಿಂಡರ್‌ ಸ್ಫೋಟ : 7 ಮಂದಿ ಗಂಭೀರ ಗಾಯ – vishwanews24

Featured, ರಾಜ್ಯ ನ್ಯೂಸ್

ಗ್ಯಾಸ್ ಸಿಲಿಂಡರ್‌ ಸ್ಫೋಟ : 7 ಮಂದಿ ಗಂಭೀರ ಗಾಯ

ಕೊಪ್ಪಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು  7 ಜನ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.

ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.

ಡಿ. 15- 16 ಮಹಾರಾಷ್ಟ್ರ ನಾಸಿಕ್ ನಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಸಭೆ :  ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ ಭಾಗಿ – vishwanews24

ಹುಸೇನಮ್ಮ ಮನೆಯಲ್ಲಿ ಹೊಸದಾಗಿ ಸಿಲಿಂಡರ್ ತೆಗೆದುಕೊಂಡಿದ್ದರು. ಬೆಳಗ್ಗೆ ಆನ್‌ ಮಾಡುವಾಗ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ನೆಲಸಮವಾಗಿದೆ. ಅಲ್ಲದೇ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು‌ ಬಿಟ್ಟಿವೆ. ಮನೆಯ ಅಕ್ಕಪಕ್ಕ ನಿಂತವರಿಗೂ ಸುಟ್ಟ ಗಾಯಗಳಾಗಿವೆ.

ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ‌ ನಡೆದಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರಗಳ ಸ್ಥಗಿತಗೊಳಿಸಿದ್ದ ಸರ್ಕಾರದ ಆದೇಶ ರದ್ದು ಪಡಿಸಿದ ಹೈಕೋರ್ಟ್​- vishwanews24

Leave a Reply