ಕೊಪ್ಪಳ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು 7 ಜನ ಗಂಭೀರವಾಗಿ ಗಾಯಗೊಂಡ ಘಟನೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಅವಘಡದಲ್ಲಿ ಗಾಯಗೊಂಡವರನ್ನು ರಾಜ (38), ಸುರೇಶ್ (35), ದುರುಗಪ್ಪ (27), ಹುಸೇನಮ್ಮ (40), ನಾಗರಾಜ (18), ದುರುಗಮ್ಮ (17), ವಿಷ್ಣು (16), ಶ್ರೀಕಾಂತ್ (22) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಗಂಗಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಕಂಡು ಕುಟುಂಬಸ್ಥರು ಕಣ್ಣೀರು ಹಾಕುತ್ತಿದ್ದಾರೆ.
ಹುಸೇನಮ್ಮ ಮನೆಯಲ್ಲಿ ಹೊಸದಾಗಿ ಸಿಲಿಂಡರ್ ತೆಗೆದುಕೊಂಡಿದ್ದರು. ಬೆಳಗ್ಗೆ ಆನ್ ಮಾಡುವಾಗ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ. ಸ್ಫೋಟದ ತೀವ್ರತೆಗೆ ಇಡೀ ಮನೆ ನೆಲಸಮವಾಗಿದೆ. ಅಲ್ಲದೇ ಅಕ್ಕಪಕ್ಕದ ಮನೆಗಳ ಗೋಡೆಗಳು ಬಿರುಕು ಬಿಟ್ಟಿವೆ. ಮನೆಯ ಅಕ್ಕಪಕ್ಕ ನಿಂತವರಿಗೂ ಸುಟ್ಟ ಗಾಯಗಳಾಗಿವೆ.
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…