Featured

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ -vishwanews24

ಗ್ರಾಪಂ. ವ್ಯಾಪ್ತಿಯಲ್ಲಿ ಪಿಓಪಿ ಗಣೇಶ ಸ್ಥಾಪನೆಗಿಲ್ಲ ಅವಕಾಶ : ಸಚಿವ ಈಶ್ವರ್‌ ಖಂಡ್ರೆ ಸೂಚನೆ

ಬೆಂಗಳೂರು: ಸೆ.14ರಂದು ರಾಜ್ಯಾದ್ಯಂತ ಆಚರಿಸಲಿರುವ ಗಣೇಶ ಹಬ್ಬದ ಸಂದರ್ಭದಲ್ಲಿ ನಿಷೇಧಿತ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ಮೂರ್ತಿಗಳ ವಿಸರ್ಜನೆಗೆ ಅವಕಾಶ ನೀಡದೆ, ಪರಿಸರ ಸ್ನೇಹಿ ಬಣ್ಣರಹಿತ ಮಣ್ಣಿನ ಗಣೇಶ ಮೂರ್ತಿಗಳ ಪೂಜೆಗೆ ಉತ್ತೇಜನ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.

ಈ ಕುರಿತು ಇಲಾಖೆಯ ಕಾರ್ಯದರ್ಶಿಗೆ ಲಿಖಿತ ನಿರ್ದೇಶನ ನೀಡಿರುವ ಅವರು, ಗಣೇಶನು ಪ್ರಕೃತಿಯ ಪ್ರತೀಕವಾಗಿರುವುದರಿಂದ ಜಲಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪರಿಸರ ಸ್ನೇಹಿ ಮಣ್ಣಿನ ಗೌರಿ-ಗಣೇಶ ಮೂರ್ತಿಗಳ ಪೂಜೆ ಹಾಗೂ ವಿಸರ್ಜನೆಗೆ ಮಾತ್ರ ಅವಕಾಶ ಕಲ್ಪಿಸುವಂತೆ ಸೂಚಿಸಿದ್ದಾರೆ.

ಗಣೇಶ ಹಬ್ಬದ ಸಂದರ್ಭದಲ್ಲಿ ಯಾವುದೇ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಈಗಿನಿಂದಲೇ ಪಿಒಪಿ ಮೂರ್ತಿಗಳ ತಯಾರಿಕೆ, ದಾಸ್ತಾನು, ಸಾಗಾಟ ಹಾಗೂ ಮಾರಾಟಕ್ಕೆ ಕಡಿವಾಣ ಹಾಕಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಆದೇಶಿಸಿದ್ದಾರೆ.

ಪಿಒಪಿ ಮೂರ್ತಿಗಳು ಕ್ಯಾಲ್ಷಿಯಂ ಸಲ್ಫೇಟ್ ಹೆಮಿಹೈಡ್ರೇಟ್‌ನಿಂದ ತಯಾರಾಗಿದ್ದು, ಅವುಗಳಲ್ಲಿ ಗಂಧಕ, ಜಿಪ್ಸಮ್, ಮ್ಯಾಗ್ನೀಷಿಯಂ ಸೇರಿದಂತೆ ಹಲವು ಅಪಾಯಕಾರಿ ಅಂಶಗಳಿರುತ್ತವೆ. ಜೊತೆಗೆ ಪಾದರಸ, ಕ್ಯಾಡ್ಮಿಯಂ, ಸೀಸ ಹಾಗೂ ಇಂಗಾಲ ಅಂಶಗಳಿರುವ ರಾಸಾಯನಿಕ ಬಣ್ಣಗಳನ್ನು ಬಳಸುವುದರಿಂದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇಂತಹ ಮೂರ್ತಿಗಳನ್ನು ನದಿ, ಕೆರೆ, ಬಾವಿ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸಿದಾಗ ಭಾರ ಲೋಹಗಳು ನೀರಿನಲ್ಲಿ ಕರಗಿ ಜಲಚರಗಳ ಜೀವಕ್ಕೆ ಅಪಾಯ ಉಂಟುಮಾಡುವುದರ ಜೊತೆಗೆ ಜನರು ಹಾಗೂ ಜಾನುವಾರುಗಳ ಆರೋಗ್ಯದ ಮೇಲೂ ಪರಿಣಾಮ ಬೀರುತ್ತವೆ. ಈ ಹಿನ್ನೆಲೆಯಲ್ಲಿ ಜಲ ಮಾಲಿನ್ಯ (ತಡೆ ಮತ್ತು ನಿಯಂತ್ರಣ) ಕಾಯ್ದೆ-1974ರ ಕಲಂ 33(ಎ) ಅಡಿಯಲ್ಲಿ ರಾಜ್ಯದ ಯಾವುದೇ ಜಲಮೂಲದಲ್ಲಿ ಪಿಒಪಿ ಮೂರ್ತಿಗಳ ವಿಸರ್ಜನೆಯನ್ನು ನಿಷೇಧಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಪರಿಸರಕ್ಕೆ ಹಾನಿಕಾರಕವಾದ ಪಿಒಪಿ ಮೂರ್ತಿಗಳ ತಯಾರಿಕೆ, ಸಾಗಾಟ, ಮಾರಾಟ ಹಾಗೂ ವಿಸರ್ಜನೆ ನಿಷೇಧಿಸಿ 2023ರ ಸೆ.15ರಂದು ಸರ್ಕಾರ ಆದೇಶ ಹೊರಡಿಸಿದ್ದು, ಅದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಹೈಕೋರ್ಟ್ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಸರ ಹಾಗೂ ಜಲಮೂಲಗಳ ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago