ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ  : ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ – Vishwanews24

Featured, ರಾಜ್ಯ ನ್ಯೂಸ್

ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ  : ಪ್ರತಿ ಗ್ರಾ.ಪಂ ವ್ಯಾಪ್ತಿಯಲ್ಲಿ ಆಯುಷ್ಮಾನ್ ಕಾರ್ಡ್ ವಿತರಣೆ

ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡುಗಳು ದೊರೆಯುವಂತೆ ಮಾಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಆರೋಗ್ಯ ಮಥನ ವರ್ಚುವಲ್ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವೈದ್ಯರು, ಸಿಬ್ಬಂದಿ ಹಾಗೂಊ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆಗೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದ ಸಚಿವರು, ರಾಜ್ಯದ ಪ್ರತಿ ಗ್ರಾಮಪ ಪಂಚಾಯತಿಯಲ್ಲಿ ಆರು ತಿಂಗಳಲ್ಲಿ ರಾಜ್ಯದ ಎಲ್ಲರಿಗೂ ಈ ಕಾರ್ಡ್ ದೊರೆಯುವಂತೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಆಯುಷ್ಮಾನ್ ಕಾರ್ಡ್ ಮೂಲಕ ಜನರ ಉಚಿತ ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದಾರೆ. ಈ ಕಾರ್ಡ್ ಎಲ್ಲರಿಗೂ ದೊರೆಯುವಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಸೂಚನೆ ನೀಡಿದ್ದಾರೆ.

ಕಡಬ: ಚರ್ಚ್‌ ಗೋಪುರದಲ್ಲಿ ಕೇಸರಿ ಧ್ವಜ ಹಾಕಿದ ಪ್ರಕರಣ : ಸ್ಥಳಕ್ಕೆ ಹಿಂದೂಪರ ಸಂಘಟನೆ ಮುಖಂಡರ ಭೇಟಿ – VIshwanews24

Leave a Reply