Featured

ಗ್ರಾಮ ಪಂಚಾಯತ್ ಚುನಾವಣೆ ಭರ್ಜರಿ ಗೆಲುವಿಗೆ ಪೂರ್ವಸಿದ್ಧತೆ ನ. 27ರಂದು ಉಡುಪಿ ಜಿಲ್ಲೆಯ ಎರಡು ಕಡೆ ಗ್ರಾಮ ಸ್ವರಾಜ್ಯ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್: vishwanews24

ಗ್ರಾಮ ಪಂಚಾಯತ್ ಚುನಾವಣೆ ಭರ್ಜರಿ ಗೆಲುವಿಗೆ ಪೂರ್ವಸಿದ್ಧತೆ ನ. 27ರಂದು ಉಡುಪಿ ಜಿಲ್ಲೆಯ ಎರಡು ಕಡೆ ಗ್ರಾಮ ಸ್ವರಾಜ್ಯ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್: vishwanews24

ಉಡುಪಿ: ಗ್ರಾಮ ಪಂಚಾಯತ್ ಚುನಾವಣೆಗೆ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ 27 ರಂದು ಉಡುಪಿ ಜಿಲ್ಲೆಯ ಎರಡು ಕಡೆ ಗ್ರಾಮ ಸ್ವರಾಜ್ಯ ಸಮಾವೇಶ ಆಯೋಜಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಉಡುಪಿ ಗ್ರಾಮಾಂತರ, ಕುಂದಾಪುರ, ಬೈಂದೂರು ಮಂಡಲಗಳಿಗೆ ಸಂಬಂಧಿಸಿದಂತೆ ಬೆಳಗ್ಗೆ 11.00ಕ್ಕೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಮತ್ತು ಉಡುಪಿ ನಗರ, ಕಾಪು, ಕಾರ್ಕಳ ಮಂಡಲಗಳಿಗೆ ಸಂಬಂಧಿಸಿದಂತೆ ಮಧ್ಯಾಹ್ನ 3.00ಕ್ಕೆ ಅಮೃತ್‌ ಗಾರ್ಡನ್, ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ ಬಳಿ, ಅಂಬಾಗಿಲು-ಮತ್ತೂರು ಉಡುಪಿಯಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶಗಳು ನಡೆಯಲಿವೆ.

ಜಿಲ್ಲೆಯ 154 ಗ್ರಾಮ ಪಂಚಾಯತ್‌ಗಳ ಪೈಕಿ 98 ಗ್ರಾಮ ಪಂಚಾಯತ್‌ಗಳಲ್ಲಿ ಬಿಜೆಪಿ ಬೆಂಬಲಿತ ಆಡಳಿತವಿತ್ತು. ಮುಂದಿನ ಚುನಾವಣೆಯಲ್ಲಿ 130 ಕ್ಕೂ ಹೆಚ್ಚು ಗ್ರಾಮ ಪಂಚಾಯತ್‌ಗಳನ್ನು ಗೆಲ್ಲುವ ಗುರಿ ಹೊಂದಲಾಗಿದೆ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕುಟುಂಬ ಮಿಲನ ಕಾರ್ಯಕ್ರಮಗಳ ಜೊತೆಗೆ ಪಂಚರತ್ನ ಸಮಿತಿ ಹಾಗೂ ಪೇಜ್ ಪ್ರಮುಖರ ನೇಮಕ ಮಾಡಲಾಗಿದೆ.

ಮಂಗಳೂರು ಸಂಸದರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಉಪಮುಖ್ಯಮಂತ್ರಿ ಡಾ| ಸಿ.ಎನ್. ಅಶ್ವತ್ ನಾರಾಯಣ್, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಂಸದೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ಕೋಲಾರ ಶಾಸಕ ಮುನಿರಾಜು ಹಾಗೂ ಜಿಲ್ಲೆಯ ಶಾಸಕರು ಸಮಾವೇಶದಲ್ಲಿ. ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಗ್ರಾಮ ಪಂಚಾಯತ್ ಪ್ರಮುಖರ ಸಹಿತ ಸಂಸದರು, ಶಾಸಕರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ-ಮಂಡಲಗಳ ಪದಾಧಿಕಾರಿಗಳು, ಮಂಡಲಗಳ ಮೊರ್ಚಾಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಹಾಶಕ್ತಿಕೇಂದ್ರ ಮತ್ತು ಶಕ್ತಿಕೇಂದ್ರಗಳ ಪ್ರಮುಖರು, ಜಿಲ್ಲಾ ಪಂಚಾಯತ್-ತಾಲೂಕು ಪಂಚಾಯತ್-ಕೃಷಿ ಉತ್ಪನ್ನ ಮಾರುಕಟ್ಟೆಯ ಚುನಾಯಿತ ಸದಸ್ಯರು, ಮಂಡಲಗಳ ಗ್ರಾಮ ಪಂಚಾಯತ್ ಚುನಾವಣಾ ಪ್ರಭಾರಿಗಳು ಭಾಗವಹಿಸಲಿದ್ದಾರೆ.

ಜಿಲ್ಲೆಯಾದ್ಯಂತ ಪ್ರತೀ ಗ್ರಾಮ ಪಂಚಾಯತ್‌ಗಳಲ್ಲಿ ಜಯಬೇರಿಗಳಸುವ ಹುಮ್ಮಸ್ಸಿನೊಂದಿಗೆ ಕಾರ್ಯಕರ್ತರ ತಂಡ ಸಜ್ಜಾಗಿದೆ ಎಂದು ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.

ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ತೆಗ್ಡೆ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago