Featured

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗಮನಾರ್ಹ ಸಾಧನೆಯನ್ನೇ ಮಾಡಿದೆ : ಹೆಚ್‌ ಡಿ ಕುಮಾರಸ್ವಾಮಿ -Vishwanews24

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಗಮನಾರ್ಹ ಸಾಧನೆಯನ್ನೇ ಮಾಡಿದೆ : ಹೆಚ್‌ ಡಿ ಕುಮಾರಸ್ವಾಮಿ -Vishwanews24

ಬೆಂಗಳೂರು,  : ”ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ” ಎಂದು ಜೆಡಿಎಸ್‌ ಮುಖಂಡ, ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ರಾಷ್ಟ್ರೀಯ ಪಕ್ಷಗಳ ಹಣ, ಅಧಿಕಾರದ ಹೊರತಾಗಿಯೂ ಪ್ರಾದೇಶಿಕ ಪಕ್ಷ ಜೆಡಿಎಸ್‌ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗಮನಾರ್ಹ ಸಾಧನೆಯನ್ನೇ ಮಾಡಿದೆ. ಪಕ್ಷ ಬೆಂಬಲಿಸಿದ ಅಭ್ಯರ್ಥಿಗಳ ಮೇಲೆ ವಿಶ್ವಾಸವಿಟ್ಟ ಮತದಾರರಿಗೆ ಕೃತಜ್ಞತೆಗಳು. ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆಗಳು. ಸೋತರೂ, ಹೋರಾಟ ನಡೆಸಿದ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸದಾ ಇರಲಿದೆ” ಎಂದು ತಿಳಿಸಿದ್ದಾರೆ.

”ಚುನಾವಣೆಯಲ್ಲಿ ಈ ಹಂತದ ಸಾಧನೆ ಮಾಡಲು ನೆರವಾದವರು ಪಕ್ಷದ ತಳಮಟ್ಟದ ಕಾರ್ಯಕರ್ತರು. ರಾಜಕೀಯದ ಪ್ರತಿಕೂಲ ಪರಿಸ್ಥಿತಿಯ ನಡುವೆಯೂ ಕಾರ್ಯಕರ್ತರು ಕೆಚ್ಚೆದೆಯ ಹೋರಾಟ ತೋರಿದ್ದರ ಫಲವಾಗಿಯೇ ನಮ್ಮ ಅಭ್ಯರ್ಥಿಗಳು ಚುನಾವಣೆಯಲ್ಲಿ ಜಯಿಸಿದ್ದಾರೆ. ಪಕ್ಷ ತಳ ಮಟ್ಟದಲ್ಲಿಯೂ ಸ್ಥಿರ, ದೃಢವಾಗಿದೆ ಎಂದು ತೋರಿಸಿದ ಕಾರ್ಯಕರ್ತ ಸೋದರರಿಗೆ ನಾನು ಸದಾ ಋಣಿ” ಎಂದು ಹೇಳಿದ್ದಾರೆ.

”ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ಗ್ರಾಮಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಲಿ. ಸ್ವಾವಲಂಬಿ ಗ್ರಾಮೀಣ ಭಾರತದ ಪ್ರಗತಿಗೆ ಗಮನಾರ್ಹ ಕೊಡುಗೆ ನೀಡಲಿ ಎಂದು ಆಶಿಸುತ್ತೇನೆ. ಜೆಡಿಎಸ್‌ ಬೆಂಬಲಿತ ಮತ್ತು ಇತರ ಸದಸ್ಯರು ತಮ್ಮ ಗ್ರಾಮ ಪಂಚಾಯಿತಿಯನ್ನು ಮಾದರಿಯಾಗಿ ರೂಪಿಸಬೇಕು ಎಂದು ನಾನು ಹೇಳಲು ಇಚ್ಛಿಸುತ್ತೇನೆ” ಎಂದಿದ್ದಾರೆ.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

1 day ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

1 day ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

1 day ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

1 day ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

1 day ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

1 day ago