ಉಡುಪಿ: ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುವುದರೊಂದಿಗೆ ಪಕ್ಷದ ಈ ಹಿಂದಿನ ಇತಿಹಾಸವನ್ನು ಮರುಕಳಿಸಲು ಪ್ರತಿಯೊಬ್ಬರೂ ಒಗ್ಗಟ್ಟಿನಿಂದ ತೊಡಗಿಸಿಕೊಳ್ಳಬೇಕು.
ಸಾರ್ವಜನಿಕರೊಂದಿಗೆ ಸ್ಪಂದಿಸುವ ಕಾರ್ಯಕರ್ತರನ್ನು ನಾಯಕರನ್ನಾಗಿಸುವ ಗ್ರಾಮ ಪಂಚಾಯತ್ ಚುನಾವಣೆ ತಳಮಟ್ಟದಲ್ಲಿ ಪಕ್ಷವನ್ನು ಬೆಳೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಹೇಳಿದರು.
ಗ್ರಾಮ ಪಂಚಾಯತ್ ಚುನಾವಣೆಯ ಪೂರ್ವ ತಯಾರಿಗಾಗಿ ಜಿಲ್ಲಾ ಕಾಂಗ್ರಸ್ ಭವನದಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಗ್ರಾಮ ಸ್ವರಾಜ್ ದ ಆಶಯಗಳನ್ನು ಸಾಕಾರಗೊಳಿಸುವಲ್ಲಿ ಗ್ರಾಮ ಪಂಚಾಯತ್‌ಗಳು ಪ್ರಧಾನ ಭೂಮಿಕೆ ವಹಿಸುತ್ತವೆ ಈ ನಿಟ್ಟಿನಲ್ಲಿ ಗರಿಷ್ಟ ಸ್ಥಾನಗಳನ್ನು ಗೆಲ್ಲುವುದು ಪಕ್ಷದ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವ್ಯಾಪ್ತಿಗೆ ಬರುವ 5 ಬ್ಲಾಕ್‌ಗಳಿಗೆ ಜಿಲ್ಲಾ ಕಾಂಗ್ರೆಸ್‌ನಿಂದ ಬ್ಲಾಕ್‌ಗಳಿಗೆ 3 ಜನರಂತೆ ಉಸ್ತುವಾರಿಗಳನ್ನು ನೇಮಕ ಮಾಡಲಾಗುವುದು. ಅವರು ಬ್ಲಾಕ್‌ನಿಂದ ನಿಯುಕ್ತಿಗೊಂಡ ಉಸ್ತುವಾರಿಗಳೊಂದಿಗೆ ಕೂಡಿಕೊಂಡು ಅಭ್ಯರ್ಥಿಯ ಆಯ್ಕೆ, ಸಮಸ್ಯೆಗಳ ಪರಿಹಾರ ಹಾಗೂ ಸ್ಥಳೀಯವಾಗಿ ಚುನಾವಣಾ ಪ್ರಚಾರದ ರಣನೀತಿ ರೂಪಿಸಿಕೊಳ್ಳಬೇಕಾಗಿದೆ ಎಂದರು.
ಸಭೆಯಲ್ಲಿ ದಿನೇಶ್ ಪುತ್ರನ್, ವೆರೋನಿಕಾ ಕರ್ನೇಲಿಯೋ, ಬಿ. ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ನೀರೆ ಕೃಷ್ಣ ಶೆಟ್ಟಿ, ಹರೀಶ್ ಕಿಣಿ, ಮುರಳಿ ಶೆಟ್ಟಿ, ಜ್ಯೋತಿ ಹೆಬ್ಬಾರ್, ಅಣ್ಣಯ್ಯ ಶೇರಿಗಾರ್, ಕೀರ್ತಿ ಶೆಟ್ಟಿ, ಹಬೀಬ್ ಅಲಿ, ವಿಶ್ವಾಸ್ ಅಮೀನ್, ಸತೀಶ್ ಅಮೀನ್ ಪಡುಕೆರೆ, ಹರೀಶ್ ಶೆಟ್ಟಿ ಪಾಂಗಾಳ, ಡಾ. ಸುನೀತಾ ಶೆಟ್ಟಿ, ರೋಶನಿ ಒಲಿವರ್, ಉಪೇಂದ್ರ ಮೆಂಡನ್, ಲಕ್ಷಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಬಿ. ಕುಶಲ್ ಶೆಟ್ಟಿ ಸ್ವಾಗತಿಸಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಂದಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…