ಬೆಂಗಳೂರು: ಡಿಜೆ ಹಳ್ಳಿಯಲ್ಲಿ ನಡೆದ ಕೃತ್ಯವನ್ನು ಖಂಡಿಸುತ್ತೇನೆ. ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಕೂಡ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಮಾಡಬಾರದು. ನಿನ್ನೆ ನಡೆದ ಘಟನೆಯನ್ನು ಸಂಪೂರ್ಣವಾಗಿ ಖಂಡಿಸುತ್ತೇನೆ. ಶಾಸಕರಾಗಲಿ, ಯಾರೇ ಆಗಲಿ ಅವರ ಮೇಲೆ ದಾಳಿ ಮಾಡಬಾರದು. ಪೊಲೀಸ್ ಠಾಣೆಯ ಆಸ್ತಿ- ಪಾಸ್ತಿಗೆ ಮಾಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
ಪ್ರಚೋದನಕಾರಿ ಪೋಸ್ಟ್ ಕೂಡ ಸರಿಯಲ್ಲ. ಅದು ಕೂಡ ತಪ್ಪು. ಈ ಸಂಬಂಧ ಇಂದು ಬೆಂಗಳೂರು ಶಾಸಕರ ಸಭೆ ಕರೆದಿದ್ದೇನೆ. ಅಲ್ಲಿ ಚರ್ಚೆ ಮಾಡುತ್ತೇವೆ. ನಮ್ಮ ಶಾಸಕರು ಕೂಡ ಸ್ಥಳಕ್ಕೆ ಹೋಗಿ ಶಾಂತಿ ನೆಲಸುವಂತೆ ಪ್ರಯತ್ನ ಮಾಡಿದ್ದಾರೆ. ಆದರೆ ಯಾರೂ ಕಂಟ್ರೋಲ್‍ಗೆ ಸಿಕ್ಕಿಲ್ಲ. ಬಹಳ ವ್ಯವಸ್ಥಿತವಾದ ಸಂಚು ಇದೆ ಎಂಬುದನ್ನು ಮಾಧ್ಯಮದಲ್ಲಿ ನೋಡಿದ್ದೇನೆ ಎಂದರು.
ಘಟನೆಯನ್ನು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಖಂಡಿಸುತ್ತದೆ. ಈ ಸಂಬಂಧ ಸರ್ಕಾರ ಕಾನೂನು ಕ್ರಮಕೈಗೊಳ್ಳಬೇಕೋ ಅದನ್ನು ತೆಗೆದುಕೊಳ್ಳಲಿ. ನಮ್ಮದು ಯಾವುದೇ ರೀತಿಯ ಅಭ್ಯಂತರವಿಲ್ಲ. ಸಂಪೂರ್ಣ ಸಹಕಾರವನ್ನು ಸರ್ಕಾರಕ್ಕೆ ಕೊಡುವುದಾಗಿ ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…