ಹೊಸ ದಿಲ್ಲಿ: ಪಾಕಿಸ್ತಾನದ ನಾಲ್ವರು ಭಯಂಕರ ಉಗ್ರರು ಇದೀಗ ‘ಘೋಷಿತ ಉಗ್ರರ ಪಟ್ಟಿ’ ಸೇರಿದ್ದಾರೆ. ಮಸೂದ್ ಅಝರ್, ಹಫೀಜ್ ಸಯೀದ್, ದಾವೂದ್ ಇಬ್ರಾಹಿಂ ಹಾಗೂ ಝಾಕಿ-ಉರ್-ರೆಹಮಾನ್ ಲಖ್ವಿ ಹೆಸರುಗಳನ್ನು ‘ಘೋಷಿತ ಉಗ್ರರ ಪಟ್ಟಿ’ಗೆ ಸೇರ್ಪಡೆ ಮಾಡಲಾಗಿದೆ. ಕಾನೂನು ಬಾಹಿರ ಚಟುವಟಿಕೆಗಳನ್ನು ನಿಗ್ರಹಿಸುವ ತಿದ್ದುಪಡಿ ಕಾನೂನಿನ ಅನ್ವಯ, ಈ ನಾಲ್ವರ ಹೆಸರುಗಳನ್ನು ಭಾರತ ಸರ್ಕಾರ ಸೇರ್ಪಡೆ ಮಾಡಿದೆ. ತಿದ್ದುಪಡಿ ಕಾಯ್ದೆ ಜಾರಿಯಾದ ಒಂದು ತಿಂಗಳ ಬಳಿಕ ಭಾರತ ಈ ಮಹತ್ವದ ತೀರ್ಮಾನ ಕೈಗೊಂಡಿದೆ.
1967ರ ಮೂಲ ಕಾನೂನಿನಲ್ಲಿ ವೈಯಕ್ತಿಕವಾಗಿ ಯಾರನ್ನೂ ಉಗ್ರರು ಎಂದು ಘೋಷಿಸಲು ಸಾಧ್ಯವಿರಲಿಲ್ಲ. ಗುಂಪು ಅಥವಾ ಸಂಘಟನೆಯನ್ನು ಮಾತ್ರ ಉಗ್ರರೆಂದು ಘೋಷಿಸಬಹುದಿತ್ತು. ಇದೀಗ ಸರ್ಕಾರ ಈ ನಾಲ್ವರನ್ನೂ ‘ವೈಯಕ್ತಿಕ ಘೋಷಿತ ಉಗ್ರ’ರು ಎಂದು ಘೋಷಿಸಿರುವುದರಿಂದ ‘ರೆಡ್ ಕಾರ್ನರ್’ ನೊಟೀಸ್ ಹೊರಡಿಸಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರರನ್ನು ಈ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಭಾರತದ ನಿರ್ಧಾರಕ್ಕೆ ಅಮೆರಿಕ ಪ್ರಶಂಸೆ
ಭಾರತದ ದಿಟ್ಟ ಕ್ರಮದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅಮೆರಿಕಾದ ದಕ್ಷಿಣ ಮತ್ತು ಕೇಂದ್ರೀಯ ಏಷ್ಯಾ ಭಾಗದ ಪ್ರಧಾನ ಸಹಾಯಕ ಕಾರ್ಯದರ್ಶಿ ಆಲಿಸ್ ಜಿ.ವೆಲ್ಸ್ ಅವರು, ಭಾರತದ ನೂತನ ಭಯೋತ್ಪಾದನಾ ತಡೆ ಕಾಯ್ದೆ ಹಾಗೂ ಪಟ್ಟಿಯಲ್ಲಿ ನಾಲ್ವರು ಉಗ್ರರ ಸೇರ್ಪಡೆಗೊಳಿಸಿರುವುದನ್ನು ಅಮೆರಿಕಾ ಬೆಂಬಲಿಸುತ್ತದೆ ಹಾಗೂ ಅದನ್ನು ಪ್ರಶಂಸಿಸುತ್ತದೆ. ಭಾರತದ ಈ ಹೊಸ ಕಾನೂನು ಉಗ್ರರನ್ನು ಮಟ್ಟಹಾಕಲು ಭಾರತ ಹಾಗೂ ಅಮೆರಿಕಾ ನಡೆಸುತ್ತಿರುವ ಜಂಟಿ ಕಾರ್ಯಾಚರಣೆಗೆ ಸಹಾಯಕವಾಗಲಿದೆ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…