ಲಕ್ನೋ: ಚಂದ್ರಯಾನ-3 ಬಾಹ್ಯಾಕಾಶ ನೌಕೆಯು ಬುಧವಾರ ಚಂದ್ರನ ಮೇಲೆ ಲ್ಯಾಂಡ್ ಆಗುವ ದೃಶ್ಯವನ್ನು ರಾಜ್ಯದ ಎಲ್ಲಾ ಶಾಲೆಗಳಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ನೇರ ಪ್ರಸಾರ ವೀಕ್ಷಣೆಗೆ ನಾಳೆ ಶಾಲೆಗಳು ಸಂಜೆ ಒಂದು ಗಂಟೆ ವಿಶೇಷವಾಗಿ ತೆರೆದಿರುತ್ತವೆ. ಆಗಸ್ಟ್ 23 ರಂದು ಸಂಜೆ 5:27 ಕ್ಕೆ ಚಂದ್ರಯಾನ-3 ಚಂದ್ರನ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ಇಸ್ರೋ ವೆಬ್‌ಸೈಟ್, ಯೂಟ್ಯೂಬ್ ಚಾನೆಲ್ ಮತ್ತು ಡಿಡಿ ನ್ಯಾಷನಲ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ಹೇಳಿದೆ. ಹೀಗಾಗಿ ಅಂದು ಸಂಜೆ 5:15 ರಿಂದ 6:15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆಗಳನ್ನು ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ಸೂಚನೆ ಉಲ್ಲೇಖಿಸಿ ಸಿಎಂ ಹೇಳಿದ್ದಾರೆ.
ಬುಧವಾರ ಸಂಜೆ ಚಂದ್ರಯಾನ-3 ರ ವಿಕ್ರಮ್ ಲ್ಯಾಂಡರ್ ತನ್ನ ಹೊಟ್ಟೆಯಲ್ಲಿರುವ ಪ್ರಗ್ಯಾನ್ ರೋವರ್‌ನೊಂದಿಗೆ ಚಂದ್ರನ ಮೇಲ್ಮೈನಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗುವ ನಿರೀಕ್ಷೆಯಲ್ಲಿದೆ. ಚಂದ್ರಯಾನ-3 ಯೋಜನೆಯ ಚಂದ್ರನ ಲ್ಯಾಂಡಿಂಗ್ ಒಂದು ಮಹತ್ವದ ಸಂದರ್ಭವಾಗಿದ್ದು, ಇದು ನಮ್ಮ ಯುವಜನರ ಮನಸ್ಸಿನಲ್ಲಿ ಕುತೂಹಲ ಹೆಚ್ಚಿಸುವುದಲ್ಲದೇ ಅನ್ವೇಷಣೆಯ ಉತ್ಸಾಹವನ್ನು ಪ್ರಚೋದಿಸುತ್ತದೆ ಎಂದು ಅಧಿಕಾರಿ ಮಧುಸೂಧನ್ ಹುಳಗಿ ತಿಳಿಸಿದ್ದಾರೆ.
ಭಾರತೀಯ ವಿಜ್ಞಾನ ಮತ್ತು ತಂತ್ರಜ್ಞಾನದ ಶಕ್ತಿಯನ್ನು ನಾವು ಒಟ್ಟಾಗಿ ಆಚರಿಸುತ್ತಿರುವಾಗ ಇದು ಹೆಮ್ಮೆ ಮತ್ತು ಏಕತೆಯ ಆಳವಾದ ಅರ್ಥವನ್ನು ಉತ್ತೇಜಿಸುತ್ತದೆ. ಈ ಅನುಕ್ರಮದಲ್ಲಿ ಸಂಜೆ 5.15 ರಿಂದ 6.15 ರವರೆಗೆ ಶಾಲೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಸಭೆ ಆಯೋಜಿಸುವ ಮೂಲಕ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲು ಎಲ್ಲಾ ಪ್ರಾಂಶುಪಾಲರು, ಮೂಲ ಶಿಕ್ಷಣ ಅಧಿಕಾರಿಗಳಿಗೆ (ಬಿಎಸ್‌ಎ) ಸೂಚಿಸಲಾಗಿದೆ ಎಂದು ಹುಳಗಿ ಮಾಹಿತಿ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…