ತಿರುವನಂತಪುರಂ: ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು.
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್‍ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…