ರಾಜ್ಯ ನ್ಯೂಸ್

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ – vishwanews24

ಚಕ್ರವರ್ತಿ ಸೂಲಿಬೆಲೆ ಅವರನ್ನು ಗಡಿಪಾರು ಮಾಡುವಂತೆ ಕಾಂಗ್ರೆಸ್ ಆಗ್ರಹ

ಬೆಂಗಳೂರು : ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುರಿತು ಹಗುರವಾಗಿ ಮಾತನಾಡಿದ್ದಾರೆಂದು ಆರೋಪಿಸಿರುವ ರಾಜ್ಯ ಕಾಂಗ್ರೆಸ್, ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್, “ಚಕ್ರವರ್ತಿ ಸೂಲಿಬೆಲೆ, ಖರ್ಗೆ ಅವರ ಕುರಿತು ಹಗುರವಾಗಿ ಮಾತನಾಡಿರುವುದು ಖಂಡನೀಯ. ಬಾಡಿಗೆ ಭಾಷಣ ಮಾಡಿಕೊಂಡು ಬದುಕುವ ಪರಾವಲಂಬಿ ಜೀವಿಗಳಿಗೆ ಶೋಷಿತ ಸಮುದಾಯದ ನಾಯಕರೊಬ್ಬರು ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗುತ್ತದೆ” ಎಂದು ಟ್ವೀಟ್ ಮಾಡಿದೆ.

ಜೊತೆಗೆ “ಸುಳ್ಳುಗಳನ್ನು ಹಬ್ಬಿಸುತ್ತ, ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿರುವ ಇಂತಹ ಕ್ರಿಮಿಗಳನ್ನು ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕೆಂದು” ಗೃಹಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡುತ್ತೇವೆ ಎಂದು ಕಾಂಗ್ರೆಸ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.

ಚಕ್ರವರ್ತಿ ಸೂಲಿಬೆಲೆ ಅವರು ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ಕಲುಬುರುಗಿಯ ಇಎಸ್ ಐ ಆಸ್ಪತ್ರೆ ವಿಚಾರವಾಗಿ ಖರ್ಗೆ ಅವರ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದರು. ಇಎಸ್ ಐ ಆಸ್ಪತ್ರೆಯ ಡ್ರೋನ್ ದೃಶ್ಯ ನೋಡಿದರೆ ಖರ್ಗೆ ಹೆಸರು ಕಾಣಿಸುತ್ತದೆ. ಆಸ್ಪತ್ರೆ ಮೇಲ್ಭಾಗದಿಂದ ನೋಡಿದರೆ ಅವರ ಹೆಸರು ಕಾಣಿಸುತ್ತದೆ. ಸರ್ಕಾರಿ ಕಟ್ಟಡದ ಮೇಲೆ ಖರ್ಗೆ ಹೆಸರು ಯಾಕೆ? ತಮ್ಮ ಹೆಸರು ಶಾಶ್ವತಗೊಳಿಸುವಂತ ಅಯೋಗ್ಯರಿದ್ದಾರೆ ಎಂದು ಕಿಡಿಕಾರಿದ್ದರು. ‘ಏಯ್ ಪುಣ್ಯಾತ್ಮ ಯಾರಪ್ಪನ ದುಡ್ಡು ಎಂದು ಮಾಡಿದ್ಯಪ್ಪ? ನಾಚಿಕೆಯಾಗಲ್ವ?’ ಎಂದು ಖರ್ಗೆ ಅವರನ್ನು ಏಕವಚದಲ್ಲಿ ಸಂಬೋಧಿಸಿದ್ದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

12 hours ago