Featured

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ , ನಾವು ಗೆಲ್ಲೋದಷ್ಟೇ  ಮುಖ್ಯ : ಡಾ.ಜಿ‌.ಪರಮೇಶ್ವರ್ – vishwanews24

ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ , ನಾವು ಗೆಲ್ಲೋದಷ್ಟೇ  ಮುಖ್ಯ : ಡಾ.ಜಿ‌.ಪರಮೇಶ್ವರ್

ಬೆಂಗಳೂರು: ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ನಮಗೆ ಮುಖ್ಯ ಅಲ್ಲ ಎಂದು ಗೃಹ ಸಚಿವ ಡಾ.ಜಿ‌.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ನಿಖಿಲ್ ಸ್ಪರ್ಧೆ ಮಾಡಿದ್ದಾರೆ. ಯಾರು ಸ್ಪರ್ಧೆ ಮಾಡ್ತಾರೆ ಅನ್ನೋದು ನಮಗೆ ಮುಖ್ಯ ಅಲ್ಲ. ನಾವು ಗೆಲ್ಲೋದಷ್ಟೇ ನಮಗೆ ಮುಖ್ಯ. ಅದಕ್ಕೆ ಬೇಕಾದ ರಣ ನೀತಿಯನ್ನು ನಾವು ಮಾಡ್ತೀವಿ. ಅವರು ಯಾರನ್ನಾದರೂ ನಿಲ್ಲಿಸಿಕೊಳ್ಳಲಿ ಎಂದಿದ್ದಾರೆ.

ಇದೇ ಸಂದರ್ಭದಲ್ಲಿ ಶಿಗ್ಗಾವಿಯಲ್ಲಿ ಅಜ್ಜಂ ಫೀರ್ ಬಂಡಾಯ ಸ್ಪರ್ಧೆ ವಿಚಾರವಾಗಿ, ಪ್ರಯತ್ನ ಮಾಡಿ ಮನವೊಲಿಕೆ ಮಾಡ್ತೀವಿ. ನಮ್ಮವರೇ ಹೆಚ್ಚು ಬಂಡಾಯ ಎದ್ದರೆ ಕಷ್ಟ. ಮನವೊಲಿಕೆ ಮಾಡುವ ಕೆಲಸ ಪಕ್ಷ ಮಾಡುತ್ತದೆ. ಅಂತಿಮವಾಗಿ ಯಾರು ಗೆಲ್ತಾರೆ ಎಂಬ ಮಾಹಿತಿ ಆಧಾರದ ಮೇಲೆಯೇ ಟಿಕೆಟ್ ಕೊಟ್ಟಿರುತ್ತಾರೆ. ಈ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮವಾಗಿರುತ್ತದೆ ಎಂದಿದ್ದಾರೆ.

ಶಾಸಕ ಸತೀಶ್ ಸೈಲ್ ಬಂಧನ ವಿಚಾರ 2009ರ ಕೇಸ್ ಇದಾಗಿದ್ದು, ಅನಧಿಕೃತ ಗಣಿಗಾರಿಕೆ ಎಂದು ಕೋರ್ಟ್ ಹೇಳಿದೆ. ಹಿಂದೆ ಸೀಜ್ ಮಾಡಲಾಗಿತ್ತು. ಗೊತ್ತಿಲ್ಲದಂತೆ ರಫ್ತು ಮಾಡಿದ್ದರು ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಹಿಂದೆಯೂ ಅರೆಸ್ಟ್ ಆಗಿದ್ದರು, ನಂತರ ಬೇಲ್ ಮೇಲೆ ಬಿಟ್ಟಿದ್ದರು. ಕಾನೂನಿನಲ್ಲಿ ಮುಂದೆ ಏನಾಗಲಿದೆ ಎಂದು ನೋಡೋಣ ಎಂದಿದ್ದಾರೆ.

ಮುಡಾ ಕೇಸ್ ವಿಚಾರವಾಗಿ, ಸಿಎಂ ಮೇಲ್ಮನವಿ ಸಲ್ಲಿಸಿದ್ದಾರೆ. ಡಬ್ಬಲ್ ಬೆಂಚ್‌ಗೆ ಹೋಗೋದಕ್ಕೆ ಕಾನೂನಿನಲ್ಲಿ ಅವಕಾಶ ಇದೆ. ಕೋರ್ಟ್‌ನಲ್ಲಿ ಏನು ತೀರ್ಮಾನ ಆಗುತ್ತೆ ನೋಡೋಣ ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago