ಬೆಂಗಳೂರು: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.
ಕೊನೆ ಕ್ಷಣದವರೆಗೂ ಟಿಕೆಟ್ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಸಿಪಿವೈ ತೆರಳಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್ ಸಂಪರ್ಕಿಸಿದ್ದಾರೆ.
ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…