Featured

ಚನ್ನಪಟ್ಟಣ ಉಪಚುನಾವಣೆ : ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕೆ – vishwanews24

ಚನ್ನಪಟ್ಟಣ ಉಪಚುನಾವಣೆ : ಸ್ವತಂತ್ರ ಅಭ್ಯರ್ಥಿಯಾಗಿ ಯೋಗೇಶ್ವರ್‌ ಕಣಕ್ಕೆ

ಬೆಂಗಳೂರು: ಬಿಜೆಪಿಯಿಂದ ಟಿಕೆಟ್‌ ಸಿಗದ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ ಯೋಗೇಶ್ವರ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿದ್ದಾರೆ.

ಕೊನೆ ಕ್ಷಣದವರೆಗೂ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದ ಸಿಪಿವೈಗೆ ಬಿಜೆಪಿ ಕಡೆಯಿಂದ ಯಾವುದೇ ಶುಭ ಸುದ್ದಿ ಸಿಗದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲು ನಿರ್ಧರಿಸಿದ್ದಾರೆ.

ಇಂದು ಸಂಜೆ 4 ಗಂಟೆಗೆ ಬಿಜೆಪಿ ಪರಿಷತ್‌ ಸದಸ್ಯತ್ವಕ್ಕೆ ಸಿಪಿವೈ ರಾಜೀನಾಮೆ ನೀಡಲಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯಲ್ಲಿರುವ ಸಭಾಪತಿ ಹೊರಟ್ಟಿ ಭೇಟಿಗಾಗಿ ಸಿಪಿವೈ ತೆರಳಿದ್ದಾರೆ. ಅಷ್ಟೇ ಅಲ್ಲದೇ ನಾಮಪತ್ರ ಸಲ್ಲಿಕೆಗೆ ವಕೀಲರನ್ನು ಯೋಗೇಶ್ವರ್‌ ಸಂಪರ್ಕಿಸಿದ್ದಾರೆ.

ಇಂದು ಬೆಳಗ್ಗೆ ಮಾತನಾಡಿದ್ದ ಯೋಗೇಶ್ವರ್‌, ಜೆಡಿಎಸ್ ಚಿನ್ಹೆಯಿಂದ ಸ್ಪರ್ಧೆ ಕುರಿತು ನೀಡಿದ್ದ ಆಫರ್‌ ಅನ್ನು ನಾನು ತಿರಸ್ಕರಿಸಿದ್ದೇನೆ. ನಾನು ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಇದೆ. ಇನ್ನೂ ಎರಡು ದಿನ ಕಾದು ನೋಡುವ ತಂತ್ರವನ್ನು ಉಪಯೋಗಿಸುತ್ತೇನೆ. ನಾನು ಈ ಕ್ಷಣಕ್ಕೂ ಬಿಜೆಪಿಯಿಂದ ಸ್ಪರ್ಧೆ ಮಾಡಬೇಕು ಎಂದುಕೊಂಡಿದ್ದೇನೆ. ಇಂದು (ಅ.21) ಬೆಳಗ್ಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾರೆ ಎಂದು ನಮ್ಮ ಜಿಲ್ಲಾಧ್ಯಕ್ಷರು ಎಂದು ಹೇಳಿದ್ದರು. ಹಾಗಂದ್ಮೇಲೆ ಇನ್ನೇನಿದೆ, ಆಯ್ತು ಒಳ್ಳೇದಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಹೇಳಿದ್ದರು.

Vishwa News 24

Recent Posts

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು – vishwanews24

ಬೆಳ್ತಂಗಡಿ : ಹೊತ್ತಿ ಉರಿದ ಸ್ಕೂಟಿ ; ಗಾಯಗೊಂಡಿದ್ದ ಬಾಲಕ ಮೃತ್ಯು ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲುವಿನಲ್ಲಿ ಸ್ಕೂಟಿಯೊಂದು…

5 minutes ago

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಮತ್ತೆ ಆರಂಭ ; ಗುರುತಿನ ಚೀಟಿ, ಶುಲ್ಕ ಕಡ್ಡಾಯ – vishwanews24

ಬೆಳ್ತಂಗಡಿ: ಗಡಾಯಿಕಲ್ಲು ಪ್ರವೇಶ ಆರಂಭ - ಈ ನಿಯಮ ಪಾಲನೆ ಕಡ್ಡಾಯ ಅಧಿಕೃತ ವೆಬ್‌ಸೈಟ್‌ ಮೂಲಕ ಪೂರ್ವ ನೋಂದಣಿ ಮಾಡಿಸಿಕೊಳ್ಳುವುದು…

12 minutes ago

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ – vishwanews24

ಉಡುಪಿ: ಡಿವೈಡರ್  ಮೇಲೇರಿದ ಸ್ಕೂಲ್‌ ಬಸ್‌ ; ತಪ್ಪಿದ ಅನಾಹುತ ಉಡುಪಿ: ಅಲ್-ಇಬಾದಾ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಗುರುವಾರ…

34 minutes ago

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

19 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

19 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

19 hours ago