ಚನ್ನಪಟ್ಟಣ : ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – vishwanews24
ಚನ್ನಪಟ್ಟಣ : ಭರ್ಜರಿ ರೋಡ್ ಶೋ ಮೂಲಕ ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ರಾಮನಗರ: ಚನ್ನಪಟ್ಟಣ ಉಪಚುನಾವಣಾ ಕಣ ರಂಗೇರಿದ್ದು, ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.
ಮುಕ್ಕ : ಬೀಚ್‌ನಲ್ಲಿ ಈಜಲು ತೆರಳಿ ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆ – vishwanews24
ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್‌ಗೆ ಹೆಚ್‌ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.
ಉಡುಪಿ : ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ – vishwanews24
