Featured

ಚನ್ನಪಟ್ಟಣ : ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ – vishwanews24

ಚನ್ನಪಟ್ಟಣ : ಭರ್ಜರಿ ರೋಡ್ ಶೋ ಮೂಲಕ  ಎನ್‌ಡಿಎ ಮೈತ್ರಿ ಅಭ್ಯರ್ಥಿಯಾಗಿ  ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ರಾಮನಗರ: ಚನ್ನಪಟ್ಟಣ ಉಪಚುನಾವಣಾ  ಕಣ ರಂಗೇರಿದ್ದು, ಎನ್‌ಡಿಎ  ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಕುಟುಂಬ ಸಮೇತರಾಗಿ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೋಸ್ತಿ ನಾಯಕರೊಂದಿಗೆ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ತಾಲೂಕು ಕಚೇರಿವರೆಗೂ ಭರ್ಜರಿ ರೋಡ್ ಶೋ ನಡೆಸಿದರು. ಈ ವೇಳೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಮಾಜಿ ಡಿಸಿಎಂ ಅಶ್ವಥ್ ನಾರಾಯಣಗೌಡ, ಸಂಸದ ಡಾ.ಮಂಜುನಾಥ್ ಸೇರಿ ಜೆಡಿಎಸ್‌ನ ಶಾಸಕರು, ಮಾಜಿ ಸಚಿವರು ಭಾಗಿಯಾಗಿದ್ದರು. ಅಲ್ಲದೇ ಬಿಜೆಪಿ ಹಾಗೂ ಜೆಡಿಎಸ್‌ನ ಸುಮಾರು 20 ಸಾವಿರ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗವಹಿಸಿದ್ದರು.

ರೋಡ್ ಶೋ ಬಳಿಕ ತಾಲೂಕು ಕಚೇರಿಗೆ ಆಗಮಿಸಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ನಿಖಿಲ್‌ಗೆ ಹೆಚ್‌ಡಿಕೆ, ಆರ್.ಅಶೋಕ್, ಸದಾನಂದಗೌಡ, ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್, ಈ ಬಾರಿ ಚಕ್ರವ್ಯೂಹ ಬೇಧಿಸುವ ಶಕ್ತಿ ಚನ್ನಪಟ್ಟಣದ ಜನ ನೀಡುತ್ತಾರೆ. ಹಣ ಬಲ, ತೋಳ್ಬಲ ಯಾವುದೂ ನಡೆಯಲ್ಲ. ಚನ್ನಪಟ್ಟಣ ಜನ ನಮ್ಮ ಅಭಿವೃದ್ಧಿ ಕೆಲಸಗಳಿಗೆ ನಮಗೆ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago