ಬೆಂಗಳೂರು: ಉಪಚುನಾವಣೆಯಲ್ಲಿ ಚನ್ನಪಟ್ಟಣದ ಜನ ನನ್ನ ಮೇಲೆ ಒಲವು ತೋರಿದರೆ, ಪಕ್ಷ ತೀರ್ಮಾನಿಸಿದರೆ ನಾನು ಸ್ಪರ್ಧೆ ಮಾಡದೇ ಬೇರೆ ವಿಧಿ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, “ಚನ್ನಪಟ್ಟಣ ನನ್ನ ಹೃದಯದಲ್ಲಿದೆ. ಇದು ಈ ಹಿಂದೆ ಸಾತನೂರು ವಿಧಾನಸಭಾ ಕ್ಷೇತ್ರದ ಭಾಗವಾಗಿತ್ತು. ಆ ಮೂಲಕ ಈ ಭಾಗ ನನಗ ನನಗೆ ರಾಜಕೀಯವಾಗಿ ಜನ್ಮ ನೀಡಿದ ಸ್ಥಳ. ಈ ಭಾಗದ ಜನ ಕಷ್ಟಕಾಲದಲ್ಲಿ ನಮಗೆ ಹೆಚ್ಚಿನ ಮತ ನೀಡಿ ಬೆಂಬಲ ನೀಡಿದ್ದಾರೆ. ನಾನು ಅವರ ಋಣ ತೀರಿಸಬೇಕು ಎಂದರು.
ಕನಕಪುರ ಯಾವ ರೀತಿ ಅಭಿವೃದ್ಧಿ ಮಾಡಿದ್ದೇನೋ ಅದಕ್ಕಿಂತ ಹೆಚ್ಚಿನ ಅಭಿವೃದ್ಧಿಗೆ ಅವಕಾಶವಿದೆ. ಹೀಗಾಗಿ ಈ ಕ್ಷೇತ್ರದ ಮೇಲೆ ನನಗೆ ವಿಶೇಷವಾದ ಕಾಳಜಿ ಇದೆ. ಚನ್ನಪಟ್ಟಣ ಅಭಿವೃದ್ಧಿ ಹಾಗು ಬದಲಾವಣೆಗೆ ನಾನು ಬದ್ಧವಾಗಿದ್ದೇನೆ ಎಂದರು.
ಹೀಗಾಗಿ ಇಂದು ಮತದಾರರು ಹಾಗು ನಾಯಕರ ಜತೆ ಮಾತನಾಡುತ್ತೇನೆ. ಅಲ್ಲಿನ ಜನ ಏನು ಹೇಳುತ್ತಾರೆ ಎಂದು ತಿಳಿದು ನಂತರ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…