ಚಪ್ಪಲಿ ಧರಿಸಿ ದೈವದ ದೀವಟಿಗೆ ಹಿಡಿದುಕೊಂಡ ಸಂಸದ ತೇಜಸ್ವಿ ಸೂರ್ಯ: ದೈವಾರಾಧನೆಗೆ ಅವಮಾನ ಮಾಡಿದ್ದಾರೆಂದು ಆಕ್ರೋಶ  – Vishwanews24

ರಾಜ್ಯ ನ್ಯೂಸ್

ಚಪ್ಪಲಿ ಧರಿಸಿ ದೈವದ ದೀವಟಿಗೆ ಹಿಡಿದುಕೊಂಡ ಸಂಸದ ತೇಜಸ್ವಿ ಸೂರ್ಯ: ದೈವಾರಾಧನೆಗೆ ಅವಮಾನ ಮಾಡಿದ್ದಾರೆಂದು ಆಕ್ರೋಶ 

ವೈರಲ್ ಬೆನ್ನಲ್ಲೇ ಫೋಟೋ ಡಿಲೀಟ್..

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಚಪ್ಪಲಿ ಹಾಕಿಕೊಂಡೇ ದೈವದ ದೀವಟಿಗೆ ಹಿಡಿದು ನಿಂತ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಮೂಲಕ ತೇಜಸ್ವಿ ಸೂರ್ಯ ದೈವರಾಧನೆಗೆ ಅವಮಾನ ಮಾಡಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ.

ನಿನ್ನೆ ಬೆಂಗಳೂರಿನ ರಾಷ್ಟ್ರೋತ್ಥಾನದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವರಾಧನೆಯ ಕಾರ್ಯಕ್ರಮವಿತ್ತು. ಇದರಲ್ಲಿ ತೇಜಸ್ವಿ ಅವರು ಚಪ್ಪಲಿ ಧರಿಸಿ ದೈವದ ದೀವಟಿಕೆ ಹಿಡಿದು ಫೋಟೋಗೆ ಪೋಸ್ ಕೊಟ್ಟಿದ್ದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಫೋಟೋ ವೈರಲ್ ಬೆನ್ನಲ್ಲೇ ದೈವಾರಾಧನೆಗೆ ತೇಜಸ್ವಿ ಅವಮಾನ ಮಾಡಿದ್ದಾರೆ ಅಂತಾ ಆಕ್ರೋಶ ಹೊರಬಿದ್ದಿದೆ. ಸದ್ಯ ಈ ಫೋಟೊವನ್ನು ಸಾಮಾಜಿಕ ಜಾಲತಾಣದಿಂದ ಸಂಸದರು ಡಿಲೀಟ್ ಮಾಡಿದ್ದಾರೆ.

ಹುಬ್ಬಳ್ಳಿ: ಉದ್ಯಮಿ ಪುತ್ರ ನಾಪತ್ತೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್ ​: ಮಗನ ಕೊಲೆಗೆ ತಂದೆಯಿಂದಲೇ ಸುಪಾರಿ – Vishwanews24

Leave a Reply