ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.
ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು.
ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.
ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…