Featured

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ – vishwanews24

ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ : ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಬಂಧನ

ಬೆಂಗಳೂರು: ಚಲನಚಿತ್ರ ನಟಿಗೆ ಲೈಂಗಿಕ ಕಿರುಕುಳ ಆರೋಪ ಪ್ರಕರಣದಡಿ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿಯನ್ನ ಪೊಲೀಸರು ಬಂಧಿಸಿದ್ದಾರೆ.

ಅರವಿಂಣದ್ ರೆಡ್ಡಿ ಎವಿಆರ್ ಗ್ರೂಪ್ ಮಾಲೀಕನಾಗಿದ್ದ. 2021ರಲ್ಲಿ ಪರಿಚಯವಾಗಿದ್ದ ನಟಿಗೆ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರ್‌ಆರ್ ನಗರ  ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಐದು ದಿನದ ಹಿಂದೆ ಈ ಪ್ರಕರಣ ಗೋವಿಂದರಾಜನಗರ ಠಾಣೆಗೆ ವರ್ಗಾವಣೆಗೊಂಡಿತ್ತು. ಅಲ್ಲದೇ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು.

ಶ್ರೀಲಂಕದಿಂದ ಬೆಂಗಳೂರಿಗೆ ಬರುವಾಗ ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ. ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಇಂದು ಬೆಳಗಿನ ಜಾವ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆರೋಪಿಯನ್ನ ಬಂಧಿಸಲಾಗಿದೆ.

ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಅರವಿಂದ್ ರೆಡ್ಡಿ ಮಹಾರಾಜ ಬಳ್ಳಾರಿ ಟಸ್ಕರ್ಸ್ ಕ್ರಿಕೆಟ್ ತಂಡದ ಮಾಲೀಕನಾಗಿದ್ದ. ಅಲ್ಲದೇ ಚಲನಚಿತ್ರ ನಿರ್ಮಾಪಕ ಆಗಿರುವ ಅರವಿಂದ್ ರೆಡ್ಡಿ ಸಿನಿಮಾ ಇಂಡಸ್ಟ್ರಿ ಜೊತೆಗೆ ಹೆಚ್ಚಾಗಿ ಗುರುತಿಸಿಕೊಂಡಿದ್ದ. ಚಲನ ಚಿತ್ರ ನಟ, ನಟಿಯರಿಗಾಗಿಯೇ ಹಲವು ಕ್ರಿಕೆಟ್ ಪಂದ್ಯಾವಳಿ ಕೂಡ ಆಯೋಜಿಸಿದ್ದ. ಅರವಿಂದ್ ರೆಡ್ಡಿ ಒಡೆತನದ ಎವಿಆರ್ ಗ್ರೂಪ್ ದುಬೈ, ಶ್ರೀಲಂಕಾ ಸೇರಿದಂತೆ ಹಲವು ಕಡೆ ನಡೆದ ಟೂರ್ನಮೆಂಟ್‌ಗೆ ಸ್ಪಾನ್ಸರ್ ಮಾಡಿತ್ತು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

12 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

13 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

13 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

14 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

14 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

14 hours ago