ಬೆಂಗಳೂರು: ಕೊರೊನಾ, ಒಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿನಿಮಾ ಥಿಯೇಟರ್ ಮೇಲೆ ಹೇರಲಾಗಿದ್ದ ನಿಯಮವನ್ನು ಸಡಿಲ ಗೊಳಿಸಿದ್ದು, ನಾಳೆಯಿಂದ ಥಿಯೇಟರ್ ಹೌಸ್ ಫುಲ್‌ಗೆ ಸರ್ಕಾರ ಅನುಮತಿ ನೀಡಿದೆ.
ಸಿಎಂ ನೇತೃತ್ವದಲ್ಲಿ ಕೋವಿಡ್ ಸಂಬಂಧಿತ ಸಭೆ ನಡೆಸಿದ್ದಾರೆ. ಚಲನಚಿತ್ರ ಮಂದಿರದೊಳಗೆ ಹೋಗುವವರು ಕಡ್ಡಾಯ ಮಾಸ್ಕ್ ಧರಿಸಬೇಕು, ಎರಡು ಡೋಸ್ ಲಸಿಕೆ ಕಡ್ಡಾಯವಾಗಿರುತ್ತದೆ. ತಿಂಡಿ ಪದಾರ್ಥಗಳನ್ನ ಥಿಯೇಟರ್ ಒಳಗೆ ತೆಗೆದುಕೊಂಡು ಹೋಗಲು ನಿಷೇಧ ಹೇರಲಾಗಿದೆ. ವಿರಾಮದ ಸಂದರ್ಭದಲ್ಲಿ ಹೊರಗೆ ಬಂದು ತಿನ್ನಬಹುದು. ಕಟ್ಟುನಿಟ್ಟಿನ ಪರಿಶೀಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.
ಆರೋಗ್ಯ ಸಚಿವ ಕೆ. ಸುಧಾಕರ್ ಮಾಧ್ಯಮದವರೊಂದಿಗೆ ಮಾತನಾಡಿ, ಡಿಸೆಂಬರ್ ಕೊನೆ ವಾರದಲ್ಲಿ ಓಮೈಕ್ರಾನ್ ಸೋಂಕು ಹೆಚ್ಚಳದ ಹಿನ್ನೆಲೆಯಲ್ಲಿ ಕೆಲ ಕ್ರಮ ತೆಗೆದುಕೊಂಡಿದ್ದೇವೆ. ನೈಟ್ ಕರ್ಫ್ಯೂ, ವೀಕೆಂಡ್ ಸೇರಿದಂತೆ ಹಲವು ನಿಯಮಗಳನ್ನು ಹಿಂದೆ ತೆಗೆದುಕೊಂಡಿದ್ದೇವು. ಇವತ್ತು ಆಸ್ಪತ್ರೆ ದಾಖಲಾತಿ 5%ನಿಂದ 2%ಗೆ ಇಳಿದಿದೆ. ನಾಳೆಯಿಂದ ಚಲನ ಚಿತ್ರಮಂದಿರಗಳಿಗೆ ರಿಲ್ಯಾಕ್ಸ್ 100% ವಿನಾಯ್ತಿ ಥಿಯೇಟರ್‍ಗಳಿಗಿದ್ದು, 50% ನಿಯಮ ಸಡಿಲಿಕೆ, ಜಿಮ್, ಈಜುಕೊಳ, ಯೋಗ ಕೇಂದ್ರಗಳಿಗೂ 100% ಭರ್ತೀಗೆ ಅವಕಾಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…