Featured

ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ – vishwanews24

ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ : 9 ಮಂದಿ ಸಜೀವ ದಹನ

ಲಕ್ನೋ: ಚಲಿಸುತ್ತಿದ್ದಾಗಲೇ ಸ್ಲೀಪರ್‌ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರು ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್‌ನಿಂದಲೇ ಜಿಗಿದಿದ್ದಾರೆ. ಘಟನೆ ವೇಳೆ ಸ್ಲೀಪರ್‌ ಬಸ್‌ನಲ್ಲಿ ಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್‌ಗೆ ಆವರಿಸಿಕೊಂಡಿದೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದ ಹೊರಕ್ಕೆ ಜಿಗಿದಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿದ್ದು, ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ಸದ್ಯ ಬಸ್‌ನಲ್ಲಿ ಕೂಲ್‌ಡೌನ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಕೂಲ್‌ಡೌನ್ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವಷ್ಟೇ ಬಸ್‌ನೊಳಗೆ ಪರಿಶೀಲನೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಬಸ್‌ನೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಮನ ಹರಿಸಿದ್ದು, ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Vishwa News 24

Recent Posts

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ – vishwanews24

ಅಕ್ಟೋಬರ್ 29ರಂದು ಗರ್ಭಗುಡಿ ಬಾಗಿಲು ಓಪನ್  12 ದಿನ ದೇವಿಯ ದರ್ಶನಕ್ಕೆ ಅವಕಾಶ ಹಾಸನ: ಈ ಬಾರಿಯ ಪ್ರಸಿದ್ಧ ಹಾಸನಾಂಬಾ…

12 minutes ago

ಶಾರ್ಜಾದಲ್ಲಿ ಹತ್ಯೆಯಾದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ – vishwanews24

ಶಾರ್ಜಾದಲ್ಲಿ ಹತ್ಯೆಯಾದ ಉಡುಪಿ ಮೂಲದ ಪ್ರಕಾಶ್ ಕುಂದರ್ ಪಾರ್ಥಿವ ಶರೀರ ಭಾರತಕ್ಕೆ ತರಲು ಯತ್ನ: ಕೋಟ ಶ್ರೀನಿವಾಸ ಪೂಜಾರಿ ಉಡುಪಿ…

27 minutes ago

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಬೆಂಗಳೂರು : ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮೀ ಯೋಜನೆ’ಯ ಅರ್ಹ ಫಲಾನುಭವಿಗಳನ್ನು ಗುರುತಿಸಲು…

33 minutes ago

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ: ಕೇರಳ ಮೂಲದ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ವಿಟ್ಲ: ಕೇರಳ…

42 minutes ago

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ – vishwanews24

ಉಡುಪಿ : ಮಾದಕ ವಸ್ತು ಮಾರಾಟ ಪ್ರಕರಣ: 9 ಮಂದಿ ಆರೋಪಿಗಳ ಬಂಧನ ಉಡುಪಿ : ಶಿರ್ವ ಮತ್ತು ಉಡುಪಿ…

48 minutes ago

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ – vishwanews24

ಮಂಗಳೂರು :  ಪೊಲೀಸರ ವಶದಿಂದ ಪರಾರಿಯಾಗಿದ್ದ ಕೊಲೆ ಆರೋಪಿ ಸೆರೆ ಮಂಗಳೂರು : ಕೊಲೆ ಪ್ರಕರಣದ ಆರೋಪಿಯೊಬ್ಬ ಪೊಲೀಸರ ವಶದಿಂದ…

55 minutes ago