Featured

ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು – vishwanews24

ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಕಾಂಕ್ರೀಟ್ ಮಿಕ್ಸರ್ ಲಾರಿ ; ಪ್ರಯಾಣಿಕರು ಪವಾಡಸದೃಶವಾಗಿ ಪಾರು

ಬೆಳಗಾವಿ: ಬೆಂಗಳೂರಿನ ನೆಲಮಂಗಲದಲ್ಲಿ ಕಳೆದ ಡಿಸೆಂಬರ್‌ನಲ್ಲಿ ನಡೆದಿದ್ದ ಭೀಕರ ಅಪಘಾತವನ್ನು ನೆನಪಿಸುವಂಥ ರೀತಿಯಲ್ಲಿ ಬೆಳಗಾವಿಯಲ್ಲಿ ಭೀಕರ ಆಕ್ಸಿಡೆಂಟ್‌ ಸಂಭವಿಸಿದೆ. ರಸ್ತೆ ಪಕ್ಕದಲ್ಲಿ ನಿಂತಿದ್ದ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಉರುಳಿಬಿದ್ದಿದೆ. ನೆಲಮಂಗಲದಲ್ಲಿ ನಡೆದಿದ್ದ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಸಾವು ಕಂಡಿದ್ದರೆ, ಬೆಳಗಾವಿ ಅಪಘಾತದಲ್ಲಿ ಕಾರ್‌ನ ಮೇಲೆ ಕಾಂಕ್ರಿಟ್‌ ಮಿಕ್ಸರ್‌ ಲಾರಿ ಬಿದ್ದರೂ, ಕಾರ್‌ನಲ್ಲಿದ್ದ ಇಬ್ಬರು ಪವಾಡಸದೃಶ್ಯವಾಗಿ ಪಾರಾಗಿದ್ದಾರೆ.

ಕಾರಿನ ಒಳಗೆ ಇಬ್ಬರು ಪ್ರಯಾಣಿಕರು ಸಿಕ್ಕಿಕೊಂಡಿರುವ ಮಾಹಿತಿ ಸಿಕ್ಕ ಬೆನ್ನಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆ ಬಳಿಯ ಹೈವೇ ಪಕ್ಕದಲ್ಲಿ ಘಟನೆ ನಡೆದಿತ್ತು. ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಷದ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ. ಕಾರಿನಲ್ಲಿ ಇದ್ದವರನ್ನ ರಕ್ಷಿಸಲು ದೊಡ್ಡ ಮಟ್ಟದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯಿತು. ಕ್ರೇನ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆದಿತ್ತು. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದೆ.

ಇಬ್ಬರಿಗೂ ಕೂಡ ಸಣ್ಣಪುಟ್ಟ ಗಾಯಗಳಾಗಿದ್ದು, ಇಬ್ಬರು ಪ್ರಯಾಣಿಕರು ಪಾರಾದ ರೀತಿಗೇ ಜನರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಶೋಕ್‌ ಲೇಲ್ಯಾಂಡ್‌ ಕಂಪನಿಯ ಕಾಂಕ್ರಿಟ್‌ ಲಾರಿ ಬಿದ್ದ ರಭಸಕ್ಕೆ ಇಡೀ ಕಾರು ಸಂಪೂರ್ಣವಾಗಿ ಜಖಂ ಆಗಿದೆ. ಈ ವೇಳೆ ಕಾರ್‌ನ ಒಳಗಡೆಯ ಇಬ್ಬರು ಪ್ರಯಾಣಿಕರಿದ್ದರು. ಘಟನೆ ನಡೆದ ಬೆನ್ನಲ್ಲಿಯೇ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ನಡೆಸಿದ್ದರು.

ರಕ್ಷಣೆಗೆ ಒಳಗಾದ ಮೂವರ ಪೈಕಿ ಇಬ್ಬರನ್ನು ಪರಪ್ಪ ಬಾಳಿಕಾಯಿ, ನಿಂಗಪ್ಪ ಕೊಪ್ಪದ್ ಎಂದು ಗುರುತಿಸಲಾಗಿದೆ. ಧಾರವಾಡದಿಂದ ಬೆಳಗಾವಿಗೆ ಬರುವಾಗ ಈ ಘಟನೆ ನಡೆದಿದೆ. ಸಂಬಂಧಿಗಳ ಆಗಮನಕ್ಕಾಗಿ ಸರ್ವೀಸ್ ರಸ್ತೆ ಬದಿ ಕಾರು ಪಾರ್ಕ್ ಮಾಡಿ ಕಾಯುತ್ತಿದ್ದರು ಎನ್ನಲಾಗಿದೆ.

ಕೇವಲ 15 ನಿಮಿಷದಲ್ಲೇ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಸ್ಥಳೀಯ ಜನರು, ಎರಡು ಕ್ರೇನ್ ಬಳಸಿ ಕಾರ್‌ನಲ್ಲಿದ್ದವರನ್ನು ರಕ್ಷಿಸಲಾಗಿದೆ. ಲಾರಿಯನ್ನ ಮೊದಲಿಗೆ ಕ್ರೇನ್‌ ಮೂಲಕ ಮೇಲೆತ್ತಲಾಗಿದೆ. ಅನಂತರ ಲಾರಿ ಅಡಿಯಲ್ಲಿದ್ದ ಕಾರನ್ನ ಸಾರ್ವಜನಿಕರು ಹೊರಗೆ ತೆಗೆದಿದ್ದಾರೆ. ಇಬ್ಬರನ್ನ ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago