ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ.
ಬೆಳಗ್ಗಿನ ಜಾವ ದುರಂತ ಸಂಭವಿಸಿದೆ. ಬಸ್ ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಬಸ್ ಚಲಿಸುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಎಚ್ಚೆತ್ತ ಚಾಲಕ, ನಿರ್ವಾಹಕರು ತಕ್ಷಣ ಪ್ರಯಾಣಿಕರನ್ನ ಕೆಳಗಿಳಿಸಿದ್ದಾರೆ. ಕ್ರಮೇಣ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ. ಚಾಲಕನ ಸಮಯಪ್ರಜ್ಷೆಯಿಂದ 75 ಪ್ರಯಾಣಿಕರು ಸುರುಕ್ಷಿತರಾಗಿದ್ದಾರೆ.
ಬಳಿಕ ಹೆಚ್ಎಲ್ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…