Featured

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​ – Vishwanews24

ಚಲಿಸುತ್ತಿದ್ದ ರೈಲಿನ ಕಿಟಕಿ ಮೂಲಕ ತೂರಿ ಬಂದ ಕಬ್ಬಿಣದ ರಾಡ್‌,  ಪ್ರಯಾಣಿಕ ಸಾವು​

ನವದೆಹಲಿ: ಸುಮ್ಮನೆ ಕುಳಿತಿದ್ದರು ಸಹ ಸಾವು ನಮ್ಮ ಪಕ್ಕದಲ್ಲೇ ಇರುತ್ತದೆ ಎಂಬುದಕ್ಕೆ ಈ ಭಯಾನಕ ಘಟನೆ ತಾಜಾ ಉದಾಹರಣೆಯಾಗಿದೆ.

ಪ್ರಯಾಣಿಕನೊಬ್ಬ ರೈಲಿನ ಕಿಟಕಿ ಪಕ್ಕದ ಸೀಟಿನಲ್ಲಿ ಆರಾಮಾಗಿ ಕುಳಿತು ಪ್ರಯಾಣಿಸುತ್ತಿದ್ದಾಗ ಕಿಟಕಿಯಿಂದ ತೂರಿ ಬಂದ ಕಬ್ಬಿಣ ಸಲಾಕೆಯೊಂದು ಪ್ರಯಾಣಿಕನ ಕುತ್ತಿಗೆಯನ್ನು ಇರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ಹರಿಕೇಶ್​ ಕುಮಾರ್​ ದುಬೆ ಎಂದು ಗುರುತಿಸಲಾಗಿದೆ. ಈತ ನಿನ್ನೆ (ಡಿ.02) ದೆಹಲಿಯಿಂದ ಉತ್ತರ ಪ್ರದೇಶದ ಕಾನ್ಪುರ್​ಗೆ ತೆರಳುತ್ತಿದ್ದ ನಿಲಾಂಚಲ್​ ಎಕ್ಸ್​ಪ್ರೆಸ್​ ರೈಲನ್ನು ಏರಿದ್ದ. ರೈಲು ಬಿಹಾರದ ದನ್ವಾರ್​ ಮತ್ತು ಉತ್ತರ ಪ್ರದೇಶದ ಸೊಮ್ನಾ ನಡುವೆ ಇದ್ದಾಗ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ರೈಲ್ವೆ ಹಳಿಗಾಗಿ ಬಳಸುತ್ತಿದ್ದ ಕಬ್ಬಿಣದ ಸಲಾಕೆ ಕಿಟಕಿಯಿಂದ ತೂರಿ ಬಂದು ದುಬೆ ಕುತ್ತಿಗೆಯನ್ನು ನುಸುಳಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಘಟನೆ ಬೆನ್ನಲ್ಲೇ ರೈಲನ್ನು ಆಲಿಗಢ ಜಂಕ್ಷನ್​ನಲ್ಲಿ ನಿಲ್ಲಿಸಲಾಯಿತು. ಬಳಿಕ ಆತನ ಮೃತದೇಹವನ್ನು ರೈಲ್ವೆ ಪೊಲೀಸರಿಗೆ ಹಸ್ತಾಂತರ ಮಾಡಿ ಮಾಹಿತಿ ನೀಡಲಾಯಿತು. ಈ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

16 hours ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

16 hours ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

17 hours ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

17 hours ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

17 hours ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

17 hours ago