ನವದೆಹಲಿ: ಆಗಸದಲ್ಲಿ ಹಾರಾಟ ನಡೆಸುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರಿಬ್ಬರು ಹೊಡೆದಾಡಿಕೊಂಡಿರುವ ಘಟನೆ ಥಾಯ್ ಸ್ಮೈಲ್ ಏರ್‌ವೇಸ್ ವಿಮಾನದಲ್ಲಿ ನಡೆದಿದೆ.
ಕೆಲವರು ಈ ಗಲಾಟೆ ವಿಡಿಯೊವನ್ನು ಚಿತ್ರೀಕರಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.ವಿಮಾನದ ಸಿಬ್ಬಂದಿ ಅವರನ್ನು ಸಮಾಧಾನಪಡಿಸಲು ಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದಾಗಿದೆ.
ಸಮಾಧಾನವಾಗಿ ಮಾತಾಡಿ ಎಂದು ಒಬ್ಬ ವ್ಯಕ್ತಿ ಹೇಳಿದರೆ, ಮತ್ತೊಬ್ಬ ವ್ಯಕ್ತಿ ನಿಮ್ಮ ಕೈ ಕೆಳಗಿಳಿಸಿ ಎಂದು ಕೂಗುತ್ತಾನೆ. ಹೀಗೆ ಮಾತಿಗೆ ಮಾತು ಸೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗುತ್ತದೆ. ಒಬ್ಬ ವ್ಯಕ್ತಿ ಕೋಪದಿಂದ ಮತ್ತೊಬ್ಬನ ಕಪಾಳಕ್ಕೆ ಹೊಡೆಯುತ್ತಾನೆ. ಬಳಿಕ ಅದೇ ವ್ಯಕ್ತಿ ಕನ್ನಡಕ ತೆಗೆದು ನಿರಂತರವಾಗಿ ದೃಶ್ಯದಲ್ಲಿ ಕಾಣಬಹುದಾಗಿದೆ. ಮತ್ತೊಬ್ಬ ವ್ಯಕ್ತಿ ಕೈಗಳನ್ನು ಅಡ್ಡ ಇಟ್ಟು ಏಟಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ.
ಹಳೆಯ ಸ್ನೇಹಿತರು ವಿಮಾನದಲ್ಲಿ ಎದುರಾದಾಗ ಯಾವುದೋ ವಿಷಯದ ಕುರಿತಂತೆ ಮಾತಿನ ಚಕಮಕಿ ನಡೆದು ಸಂಘರ್ಷ ನಡೆದಿದೆ ಎಂದು ಹೇಳಲಾಗಿದೆ. ಬ್ಯಾಂಕಾಕ್‌ನಿಂದ ಕೋಲ್ಕತ್ತಗೆ ತೆರಳುತ್ತಿದ್ದ ವಿಮಾನದಲ್ಲಿ ಈ ಘಟನೆ ನಡೆದಿದೆ. ವಿಮಾನದ ಸಿಬ್ಬಂದಿ ಕೊನೆಗೂ ಇಬ್ಬರನ್ನೂ ಜಗಳ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…
ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…