Featured

ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿ ಮೃತ್ಯು – Vishwanews24

ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿ ಮೃತ್ಯು

ರಾಮನಗರ: ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ಜ.09ರ ಸಂಜೆ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿದೆ.

ಮೃತ ಬಾಲಕಿ ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬವರ ಮಗಳು, ರಕ್ಷಿತಾ (6) ಎಂದು ಗುರುತಿಸಲಾಗಿದೆ.

ರಕ್ಷಿತಾ ಬಿಡದಿ ಬಳಿಯ ರಾಮನಹಳ್ಳಿ ಗೇಟ್‌ನ ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ತರಗತಿಯಲ್ಲಿ ಓದುತ್ತಿದ್ದಳು. ಸಂಜೆ ಶಾಲೆ ಮುಗಿಸಿ ಬಸ್‌ನಲ್ಲಿ ಮನೆಗೆ ಹಿಂತಿರುಗುವ ವೇಳೆ ಪಿಚ್ಚನಕೆರೆ ಬಳಿ ವಿದ್ಯಾರ್ಥಿಗಳನ್ನು ಇಳಿಸಿ ಮುಂದೆ ಸಾಗಬೇಕಾದರೆ ಶಾಲಾ ಸಿಬ್ಬಂದಿಯು ಬಸ್ಸಿನ ಬಾಗಿಲು ಹಾಕಿರಲಿಲ್ಲ. ಚಾಲಕ ತಿರುವಿನಲ್ಲಿ ಬ್ರೇಕ್ ಹಾಕಿದ ಸಂದರ್ಭದಲ್ಲಿ ಸೀಟಿನ ಮೇಲೆ ಕುಳಿತಿದ್ದ ವಿದ್ಯಾರ್ಥಿನಿ ರಕ್ಷಿತಾ ಜಾರಿ ಕೆಳಗಿ ಬಿದ್ದು ಹಿಂದಿನ ಚಕ್ರ ತಲೆಯ ಮೇಲೆ ಹತ್ತಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಬಸ್‌ನಿಂದ ವಿದ್ಯಾರ್ಥಿನಿ ಬಿದ್ದು ಮರಣ ಹೊಂದಿದ ಸುದ್ದಿ ತಿಳಿದ ಕೂಡಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಬಂದು ಬಸ್ ಸಿಬ್ಬಂದಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲಿಮುಟ್ಟಿದ್ದು, ಶಾಲೆಯ ವಿರುದ್ದ ಹಾಗೂ ಸಿಬ್ಬಂದಿ ವಿರುದ್ದ ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

8 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

15 minutes ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

26 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

3 hours ago