Featured

ಚಲಿಸುತ್ತಿರುವ ರೈಲಿನ ಮುಂದೆ ಕೈಕೈ ಹಿಡಿದು ಮಲಗಿ ಆತ್ಮಹತ್ಯೆ ಮಾಡಿಕೊಂಡ ಅಪ್ಪ ಮಗ : ಸಿಸಿಟಿವಿ ವಿಡಿಯೋ ವೈರಲ್ – vishwanews24

ಚಲಿಸುತ್ತಿರುವ ರೈಲಿನ ಮುಂದೆ ಕೈಕೈ ಹಿಡಿದು ಮಲಗಿ ಆತ್ಮಹತ್ಯೆ ಮಾಡಿಕೊಂಡ ಅಪ್ಪ ಮಗ ; ಸಿಸಿಟಿವಿ ವಿಡಿಯೋ ವೈರಲ್

ಮುಂಬೈ: ಅಪ್ಪಮಗ ಚಲಿಸುತ್ತಿದ್ದ ರೈಲಿನಡಿ ಕೈಕೈ ಹಿಡಿದು ಮಲಗಿ ಸಾವನಪ್ಪಿದ ಘಟನೆ ಮುಂಬೈನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಈ ದೃಶ್ಯದ ವಿಡಿಯೋ ಎದೆ ನಡುಗಿಸುವಂತಿದೆ.

ಸೋಮವಾರ ಬೆಳಗ್ಗೆ 11:30 ರ ಸುಮಾರಿಗೆ ಮೀರಾ ಬಯಾಂದರ್ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಹರೇಶ್ ಮೆಹತಾ ಹಾಗೂ ಅವರ ಮಗ ಜಯ್ ಮೆಹತಾ ಎಂದು ಗುರುತಿಸಲಾಗಿದೆ.

ಸಿಸಿಟಿವಿ ವಿಡಿಯೋದಲ್ಲಿ ಅಪ್ಪಮಗ ಇಬ್ಬರು ಪ್ಲ್ಯಾಟ್ ಪಾರಂ ನಲ್ಲಿ ಆರಾಮಾಗಿ ನಡೆದುಕೊಂಡು ಹೋಗುತ್ತಿದ್ದು, ಬಳಿಕ ರೈಲಿನ ಟ್ರ್ಯಾಕ್ ಮೇಲೆ ಇಳಿದಿದ್ದಾರೆ. ಈ ವೇಳೆ ಬರುತ್ತಿದ್ದ ಲೋಕಲ್ ರೈಲು ಹತ್ತಿರ ಬರುವವರೆಗೂ ಕಾದ ಇಬ್ಬರು ಬಳಿಕ ಕೈ ಕೈ ಹಿಡಿದು ರೈಲಿನ ಟ್ರ್ಯಾಕ್ ಕೆಳಗೆ ಮಲಗಿದ್ದಾರೆ. ಈ ವೇಳೆ ರೈಲು ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನಪ್ಪಿದ್ದಾರೆ.

 

ಹರೇಶ್ ಮೆಹತಾ ಪತ್ನಿ ಕೋವಿಡ್ ಸಂದರ್ಭದಲ್ಲಿ ಮೃತಪಟ್ಟಿದ್ದರು ಎನ್ನಲಾಗಿದ್ದು, ಕಳೆದ ವರ್ಷವಷ್ಟೇ ಅವರ ಮಗ ಜೈ ಮೆಹತಾಗೆ ವಿವಾಹವಾಗಿತ್ತು. ಯಾವ ಕಾರಣಕ್ಕೆ ಅಪ್ಪ – ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಬಹಿರಂಗವಾಗಿಲ್ಲ. ಆದರೆ ಮನೆಯಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ನಮ್ಮ ಸಾವಿಗೆ ಯಾರೂ ಕಾರಣರಲ್ಲ ಎಂದು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

3 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

4 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

4 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

5 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

6 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

6 hours ago