Featured

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು – vishwanews24

ಚಳಿಗೆ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವು

ಬೆಳಗಾವಿ : ರಾತ್ರಿ ಮಲಗುವ ವೇಳೆ ಚಳಿಯಿಂದ ಬೆಚ್ಚಗೆ ಇರಲು ರೂಮಿನಲ್ಲಿ ಹಾಕಿದ್ದ ಬೆಂಕಿಯ ಹೊಗೆಯಿಂದ ಮೂವರು ಯುವಕರು ಉಸಿರುಗಟ್ಟಿ ಸಾವನಪ್ಪಿದ ಘಟನೆ ಬೆಳಗಾವಿಯ ಅಮನ್ ನಗರದಲ್ಲಿ ನಡೆದಿದ್ದು. ಮಂಗಳವಾರ ಸಂಜೆ ಪಾಲಕರು ಇವರನ್ನು ಹುಡುಕುತ್ತ ಬಂದಾಗಲೇ ಘಟನೆ ಗೊತ್ತಾಗಿದೆ.

ಮೃತರನ್ನು ಅಮನ್‌ ನಗರದ ನಿವಾಸಿಗಳಾದ ರಿಹಾನ್ ಮತ್ತೆ (22), ಮೋಹಿನ್ ನಾಲಬಂದ (23) ಹಾಗೂ ಸರ್ಫರಾಜ್ ಹರಪ್ಪನಹಳ್ಳಿ (22) ಮೃತಪಟ್ಟವರು. ಇವರೊಂದಿಗೇ ಮಲಗಿದ್ದ ಶಾಹನವಾಜ್ (19) ಎಂಬ ಪ್ರಜ್ಞಾಹೀನವಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಸೇರಿ ಸೋಮವಾರ ಮಧ್ಯಾಹ್ನ ಯಾವುದೋ ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದರು. ರಾತ್ರಿ ಚಳಿ ಹೆಚ್ಚಾಗಿದ್ದರಿಂದ ಮಲಗುವ ಕೋಣೆಯಲ್ಲಿ ಇದ್ದಿಲಿನ ಒಲೆ (ಶೀಗಡಿ)ಯಲ್ಲಿ ಬೆಂಕಿ ಹಾಕಿ ರೂಮಿನಲ್ಲಿ ಇಟ್ಟುಕೊಂಡಿದ್ದರು. ಅದೇ ಒಲೆಯಲ್ಲಿ ನಾಲ್ಕು ಸೊಳ್ಳೆ ನಿರೋಧಕ ಕಾಯಿಲ್‌ಗಳನ್ನು ಹಾಕಿದ್ದು ಗೊತ್ತಾಗಿದೆ.

ಯುವಕರು ಮಲಗಿದ ರೂಮಿಗೆ ಕಿಟಕಿಗಳಿಲ್ಲ. ಬಾಗಿಲನ್ನು ಭದ್ರವಾಗಿ ಹಾಕಿಕೊಂಡಿದ್ದರು. ನಿದ್ರೆಗೆ ಜಾರಿದ ಮೇಲೆ ಕೋಣೆಯ ಒಳಗೆ ಇದ್ದಿಲಿನ ಹೊಗೆ ದಟ್ಟವಾಗಿ ಆವರಿಸಿ, ಉಸಿರಾಟಕ್ಕೆ ಸಮಸ್ಯೆ ಆಗಿದೆ. ಆಕ್ಸಿಜನ್‌ ಕೊರತೆಯಿಂದ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ನಾಲ್ವರೂ ಅಕ್ಕಪಕ್ಕದ ಮನೆಯವರೇ ಆಗಿದ್ದು, ನಾಲ್ವರ ಪಾಲಕರೂ ಮಂಗಳವಾರ ಸಂಜೆಯವರೆಗೆ ಯಾರನ್ನೂ ಹುಡುಕಾಡಿಲ್ಲ. ಸಂಜೆಗೆ ಮಲಗುವ ಕೋಣೆಯ ಬಾಗಿಲು ಮುರಿದಾಗ ಘಟನೆ ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶಾಸಕ ಆಸಿಫ್‌ ಸೇಠ್‌ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತರ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಳಮಾರುತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

10 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

11 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

11 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

12 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

12 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

12 hours ago