ಚಾಮರಾಜನಗರ : ಮಹಾಶಿವರಾತ್ರಿ ಹಿನ್ನೆಲೆ – ಫೆ.17ರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧ – Vishwanews24
ಚಾಮರಾಜನಗರ : ಮಹಾಶಿವರಾತ್ರಿ ಹಿನ್ನೆಲೆ – ಫೆ.17ರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧ
ಚಾಮರಾಜನಗರ: ಮಹಾಶಿವರಾತ್ರಿ ಪ್ರಯಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಫೆ.17ರ ಬೆಳಿಗ್ಗೆ 6 ಗಂಟೆಯಿಂದ ಇದೇ ತಿಂಗಳ 21ರ ಸಂಜೆ 7 ಗಂಟೆ ವರೆಗೆ ದ್ವಿಚಕ್ರ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.ಬೈಕ್ ನಿಲುವುದಕ್ಕೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಹಿನ್ನೆಲೆ ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.
ಮಲೆ ಮಾದಪ್ಪನಿಗೆ ಹರಕೆ ಹೊತ್ತ ಸಾವಿರಾರು ಭಕ್ತರು ಶಿವರಾತ್ರಿ ಹಬ್ಬಕ್ಕೆ ನಾಲ್ಕು ದಿನಗಳ ಮುನ್ನ ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಕಡೆಯಿಂದ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. ಭಕ್ತರು ಬಸವನ ಕಡಲು ಮೂಲಕ ಕಾವೇರಿ ನದಿ ದಾಟಿಕೊಂಡು ದುರ್ಗಮ ಕಾವೇರಿ ವನ್ಯಧಾಮದಲ್ಲಿ ಬರಿಗಾಲಿನಲ್ಲಿ ಬರುತ್ತಿದ್ದಾರೆ.
