Featured

ಚಾಮರಾಜನಗರ : ಮಹಾಶಿವರಾತ್ರಿ ಹಿನ್ನೆಲೆ – ಫೆ.17ರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧ – Vishwanews24

ಚಾಮರಾಜನಗರ : ಮಹಾಶಿವರಾತ್ರಿ ಹಿನ್ನೆಲೆ – ಫೆ.17ರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ ವಾಹನ ನಿಷೇಧ

ಚಾಮರಾಜನಗರ: ಮಹಾಶಿವರಾತ್ರಿ ಪ್ರಯಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಫೆ.17ರ ಬೆಳಿಗ್ಗೆ 6 ಗಂಟೆಯಿಂದ ಇದೇ ತಿಂಗಳ 21ರ ಸಂಜೆ 7 ಗಂಟೆ ವರೆಗೆ ದ್ವಿಚಕ್ರ ವಾಹನ‌ಗಳಿಗೆ ನಿಷೇಧ ಹೇರಲಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ರಮೇಶ್ ಆದೇಶ ಹೊರಡಿಸಿದ್ದಾರೆ.ಬೈಕ್‌ ನಿಲುವುದಕ್ಕೆ ಹನೂರು ತಾಲೂಕಿನ ಕೌದಳ್ಳಿ ಬಳಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಜಾತ್ರೆ ಹಿನ್ನೆಲೆಯಲ್ಲಿ ಹೆಚ್ಚಿನ ವಾಹನಗಳು ಬರುವ ಹಿನ್ನೆಲೆ ಅಪಘಾತ ಹಾಗೂ ಟ್ರಾಫಿಕ್ ಸಮಸ್ಯೆ ಸರಿಪಡಿಸಲು ಜಿಲ್ಲಾಡಳಿತ ಈ ಆದೇಶವನ್ನು ಹೊರಡಿಸಿದೆ.

ಮಲೆ ಮಾದಪ್ಪನಿಗೆ ಹರಕೆ ಹೊತ್ತ ಸಾವಿರಾರು ಭಕ್ತರು ಶಿವರಾತ್ರಿ ಹಬ್ಬಕ್ಕೆ ನಾಲ್ಕು ದಿನಗಳ ಮುನ್ನ ಬೆಂಗಳೂರು, ಕನಕಪುರ, ನೆಲಮಂಗಲ, ಮಾಗಡಿ, ಸಾತನೂರು, ಹಾರೋಹಳ್ಳಿ, ರಾಮನಗರ ಕಡೆಯಿಂದ ಕಾಲ್ನಡಿಗೆಯಲ್ಲಿ ಪಾದಯಾತ್ರೆ ನಡೆಸಿದ್ದಾರೆ. ಭಕ್ತರು ಬಸವನ ಕಡಲು ಮೂಲಕ ಕಾವೇರಿ ನದಿ ದಾಟಿಕೊಂಡು ದುರ್ಗಮ ಕಾವೇರಿ ವನ್ಯಧಾಮದಲ್ಲಿ ಬರಿಗಾಲಿನಲ್ಲಿ ಬರುತ್ತಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

11 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

11 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

12 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

12 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

13 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

13 hours ago