Featured

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಣೆ – Vishwanews24

ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಮೊದಲ ಬಾರಿಗೆ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಇಂದು 74ನೇ ಗಣರಾಜ್ಯೋತ್ಸವ ಹಿನ್ನೆಲೆ ರಾಜ್ಯ ರಾಜಧಾನಿಯ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ದಿನದಂದು ಚಾಮರಾಜಪೇಟೆಯ ಈದ್ಗಾ ಮೈದಾನದದಲ್ಲಿ ಧ್ವಜಾರೋಹಣ ನೆರವೇರಿಸಿರುವುದು ವಿಶೇಷ. ಬೆಂಗಳೂರು ಉತ್ತರ ಉಪವಿಭಾಗ ಅಧಿಕಾರಿ ಡಾ. ಎಂ.ಜೆ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು. ಚಾಮರಾಜಪೇಟೆಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಂಗಳೂರು ಕೇಂದ್ರ ಸಂಸದ ಪಿಸಿ‌‌ ಮೋಹನ್, ಚಾಮರಾಜಪೇಟೆ ಶಾಸಕ ಜಮೀರ್‌ ಅಹ್ಮದ್ ಖಾನ್ ಉಪಸ್ಥಿತಿ ಇದ್ದರು.

ಇನ್ನು, ಧ್ವಜಾರೋಹಣ ಬಳಿಕ ರಾಷ್ಟಗೀತೆ, ನಾಡಗೀತೆಯನ್ನು ನುಡಿಸಲಾಯ್ತು. ಶ್ರೀರಾಮ ಸೇನೆ,ಹಾಗೂ ಚಾಮರಾಜ ನಾಗರಿಕರ ಒಕ್ಕೂಟ ಸಹ 74ನೇ ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿತ್ತು. ಈ ವೇಳೆ ಮೈದಾನದಲ್ಲಿ‌ ರೈತಗೀತೆ ಸಿರಿನಾದ ಸಹ ಕೇಳಿಬಂದಿದ್ದು, ಸನಾತನ ಹಿಂದೂಧರ್ಮಕ್ಕೆ ಜೈಕಾರ ಹಾಕಲಾಗಿದೆ.

ಚಾಮರಾಜಪೇಟೆ ನಾಗರೀಕರು ಭಾರತಮಾತೆಗೆ ಜೈಕಾರ ಕೂಗಿದ್ದು, ಪೊಲೀಸ್ ಭದ್ರತೆಯಲ್ಲಿ ಈದ್ಗಾ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಲಾಗಿದೆ. ಬೆಂಗಳೂರು ಕೇಂದ್ರ ಸಂಸದ ಪಿ.ಸಿ.ಮೋಹನ್, ಶಾಸಕ ಜಮೀರ್ ಅಹಮದ್ ಧ್ವಜಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಈ ಮಧ್ಯೆ, ಚಾಮರಾಜಪೇಟೆ ಮೈದಾನದಲ್ಲಿ‌ ಮಕ್ಕಳ ಕಾರ್ಯಕ್ರಮ ಸಹ ನಡೆಯುತ್ತಿದ್ದು, ಬಾಲಕಿಯರ ಪ್ರೌಢಶಾಲೆ ಮಕ್ಕಳು ಹೂಪ್ಸ್ ಪ್ರದರ್ಶನ ನೀಡುತ್ತಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

16 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

17 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

17 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

17 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago