ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿರುವ ಹೈಕೋರ್ಟ್, ಮೈದಾನವನ್ನು ಆಟದ ಬಳಕೆಗಷ್ಟೇ ಸೀಮಿತಗೊಳಿಸಬೇಕು ಹಾಗೂ ರಮ್ಜಾನ್ ಮತ್ತು ಬಕ್ರೀದ್ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು.
ಈ ಎರಡು ದಿನ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ ನೀಡಿದೆ.
ಚಾಮರಾಜಪೇಟೆಯ ಆಟದ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದ್ದು ಎಂದು ಸ್ಪಷ್ಟಪಡಿಸಿ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ಅವರು ಆ.6ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕರ್ನಾಟಕ ವಕ್ಫ್ ಮಂಡಳಿ ಮತ್ತು ಬೆಂಗಳೂರು ಜಿಲ್ಲಾ ವಕ್ಫ್ ಅಧಿಕಾರಿ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಮಧ್ಯಂತರ ಆದೇಶ ನೀಡಿದೆ.
ಮಧ್ಯಂತರ ಆದೇಶ ಏನು?:
ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದ ನ್ಯಾಯಪೀಠ, ವಕ್ಫ್ ಕಾಯ್ದೆ -1964ರ ಅಡಿ ಹೊರಡಿಸಲಾಗಿರುವ ಅಧಿಸೂಚನೆಗೆ ರಾಜ್ಯ ಸರ್ಕಾರ ಒಳಪಟ್ಟಿದೆಯೇ ಇಲ್ಲವೇ ಎಂಬ ಪ್ರಶ್ನೆ ನ್ಯಾಯಾಲಯದ ಮುಂದೆ ಇದೆ. ಆದ್ದರಿಂದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಸರ್ಕಾರ, ವಕ್ಫ್ ಮಂಡಳಿ, ಬಿಬಿಎಂಪಿ, ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಆಫ್ ಕರ್ನಾಟಕ ಯಥಾಸ್ಥಿತಿ ಕಾಪಾಡಬೇಕು. ಮೈದಾನವು ಆಟಕ್ಕೆ ಸೀಮಿತವಾಗಿದ್ದು, ಮುಸ್ಲಿಂ ಸಮುದಾಯದವರು ಬಕ್ರೀದ್ ಮತ್ತು ರಮ್ಜಾನ್ ಹಬ್ಬದಂದು ಮಾತ್ರ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಬೇರಾವುದೇ ದಿನ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಮಧ್ಯಂತರ ಆದೇಶ ಹೊರಡಿಸಿತು.
ಹೈಕೋರ್ಟ್ ಹೇಳಿದ್ದೇನು?:
ಅರ್ಜಿ ವಿಲೇವಾರಿಯಾಗುವ ತನಕ ಈದ್ಗಾ ಮೈದಾನವನ್ನು ಆಟಕ್ಕೆ ಮಾತ್ರ ಸೀಮಿತಗೊಳಿಸಬೇಕು. ಈ ಕುರಿತು ಮಧ್ಯಂತರ ಆದೇಶ ಮಾಡಲಾಗುವುದು ಎಂದು ನ್ಯಾಯಪೀಠ ಹೇಳಿದ್ದಕ್ಕೆ, ಮಧ್ಯಪ್ರವೇಶಿಸಿದ ಅಡ್ವೋಕೇಟ್ ಜನರಲ್, ಮೈದಾನವನ್ನು ಅಭಿವೃದಿಪಡಿಸಬೇಕಿದೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.
ಆಟಕ್ಕಲ್ಲದೆ ಬೇರೆ ಯಾವ ಉದ್ದೇಶಕ್ಕೆ ಈ ಜಾಗವನ್ನು ಬಳಸಬೇಕು ಎಂದು ಕೊಂಡಿದ್ದೀರಿ? ಆಟಕ್ಕಾಗಿ ಮಾತ್ರ ಮೈದಾನ ಸೀಮಿತವಾಗಿದ್ದರೆ ಸರ್ಕಾರಕ್ಕೆ ಸಮಸ್ಯೆ ಏನು? ಎಂದು ಪ್ರಶ್ನಿಸಿತಲ್ಲದೆ, ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಆಟಕ್ಕೆ ಹೊರತುಪಡಿಸಿ ಇನ್ಯಾವುದೆ ಉದ್ದೇಶಕ್ಕೆ ಮೈದಾನವನ್ನು ಬಳಸಬಾರದು. ಯಾವುದೇ ಪಕ್ಷಕಾರರು ಬೇರೆ ಯಾವುದೇ ಕಾರಣಕ್ಕೂ ಅಲ್ಲಿಗೆ ಭೇಟಿ ನೀಡುವಂತಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದು. ಅರ್ಜಿ ವಿಲೇವಾರಿಯಾದ ನಂತರ ಮೈದಾನವನ್ನು ಅಭಿವೃದ್ಧಿಪಡಿಸಬಹುದು. ಅರ್ಜಿದಾರರಿಗೂ ಇದೇ ರೀತಿಯ ಸೂಚನೆ ನೀಡಲಾಗುವುದು ಎಂದು ಹೈಕೋರ್ಟ್ ಮೌಖೀಕವಾಗಿ ಹೇಳಿತು.
ಪಡುಬಿದ್ರಿ : ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…