Featured

ಚಾಮರಾಜಪೇಟೆ ಈದ್ಗಾ ಮೈದಾನ : ರಮ್ಜಾನ್‌ ಮತ್ತು ಬಕ್ರೀದ್‌ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ : ಹೈಕೋರ್ಟ್‌ – Vishwanews24

ಚಾಮರಾಜಪೇಟೆ ಈದ್ಗಾ ಮೈದಾನ ಆಟದ ಬಳಕೆಗಷ್ಟೇ ಸೀಮಿತ ..

ರಮ್ಜಾನ್‌ ಮತ್ತು ಬಕ್ರೀದ್‌ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ..

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸರ್ಕಾರ, ವಕ್ಫ್ ಮಂಡಳಿ ಹಾಗೂ ಬಿಬಿಎಂಪಿಗೆ ನಿರ್ದೇಶನ ನೀಡಿರುವ ಹೈಕೋರ್ಟ್‌, ಮೈದಾನವನ್ನು ಆಟದ ಬಳಕೆಗಷ್ಟೇ ಸೀಮಿತಗೊಳಿಸಬೇಕು ಹಾಗೂ ರಮ್ಜಾನ್‌ ಮತ್ತು ಬಕ್ರೀದ್‌ ಹಬ್ಬಕ್ಕೆ ಪ್ರಾರ್ಥನೆ ಸಲ್ಲಿಸಲು ಮುಸ್ಲಿಂ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು.

ಈ ಎರಡು ದಿನ ಹೊರತುಪಡಿಸಿ ಮತ್ಯಾವುದೇ ದಿನ ಪ್ರಾರ್ಥನೆಗೆ ಅವಕಾಶವಿಲ್ಲ ಮಧ್ಯಂತರ ಆದೇಶ ನೀಡಿದೆ.

ಚಾಮರಾಜಪೇಟೆಯ ಆಟದ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದ್ದು ಎಂದು ಸ್ಪಷ್ಟಪಡಿಸಿ ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್‌ ಅವರು ಆ.6ರಂದು ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಕರ್ನಾಟಕ ವಕ್ಫ್ ಮಂಡಳಿ ಮತ್ತು ಬೆಂಗಳೂರು ಜಿಲ್ಲಾ ವಕ್ಫ್ ಅಧಿಕಾರಿ ಸಲ್ಲಿಸಿರುವ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್‌ ಚಂದನ ಗೌಡರ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಈ ಮಧ್ಯಂತರ ಆದೇಶ ನೀಡಿದೆ.

ಮಧ್ಯಂತರ ಆದೇಶ ಏನು?:

ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರ ಮತ್ತು ಬಿಬಿಎಂಪಿಗೆ ಸೂಚಿಸಿ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿದ ನ್ಯಾಯಪೀಠ, ವಕ್ಫ್ ಕಾಯ್ದೆ -1964ರ ಅಡಿ ಹೊರಡಿಸಲಾಗಿರುವ ಅಧಿಸೂಚನೆಗೆ ರಾಜ್ಯ ಸರ್ಕಾರ ಒಳಪಟ್ಟಿದೆಯೇ ಇಲ್ಲವೇ ಎಂಬ ಪ್ರಶ್ನೆ ನ್ಯಾಯಾಲಯದ ಮುಂದೆ ಇದೆ. ಆದ್ದರಿಂದ ಈದ್ಗಾ ಮೈದಾನಕ್ಕೆ ಸಂಬಂಧಿಸಿದಂತೆ ಸರ್ಕಾರ, ವಕ್ಫ್ ಮಂಡಳಿ, ಬಿಬಿಎಂಪಿ, ಸೆಂಟ್ರಲ್‌ ಮುಸ್ಲಿಂ ಅಸೋಸಿಯೇಷನ್‌ ಆಫ್ ಕರ್ನಾಟಕ ಯಥಾಸ್ಥಿತಿ ಕಾಪಾಡಬೇಕು. ಮೈದಾನವು ಆಟಕ್ಕೆ ಸೀಮಿತವಾಗಿದ್ದು, ಮುಸ್ಲಿಂ ಸಮುದಾಯದವರು ಬಕ್ರೀದ್‌ ಮತ್ತು ರಮ್ಜಾನ್‌ ಹಬ್ಬದಂದು ಮಾತ್ರ ಪ್ರಾರ್ಥನೆ ಸಲ್ಲಿಸಬಹುದಾಗಿದೆ. ಬೇರಾವುದೇ ದಿನ ಪ್ರಾರ್ಥನೆ ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿ ಮಧ್ಯಂತರ ಆದೇಶ ಹೊರಡಿಸಿತು.

ಪಡುಬಿದ್ರಿ : ಮುದರಂಗಡಿ ಪಿಡಿಒ ಕಾರ್ಯಕ್ಕೆ ಅಡ್ಡಿ ಆರೋಪ..ಗ್ರಾ.ಪಂ. ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರ ವಿರುದ್ಧ ಪ್ರಕರಣ ದಾಖಲು 

ಹೈಕೋರ್ಟ್‌ ಹೇಳಿದ್ದೇನು?:

ಅರ್ಜಿ ವಿಲೇವಾರಿಯಾಗುವ ತನಕ ಈದ್ಗಾ ಮೈದಾನವನ್ನು ಆಟಕ್ಕೆ ಮಾತ್ರ ಸೀಮಿತಗೊಳಿಸಬೇಕು. ಈ ಕುರಿತು ಮಧ್ಯಂತರ ಆದೇಶ ಮಾಡಲಾಗುವುದು ಎಂದು ನ್ಯಾಯಪೀಠ ಹೇಳಿದ್ದಕ್ಕೆ, ಮಧ್ಯಪ್ರವೇಶಿಸಿದ ಅಡ್ವೋಕೇಟ್‌ ಜನರಲ್‌, ಮೈದಾನವನ್ನು ಅಭಿವೃದಿಪಡಿಸಬೇಕಿದೆ. ಅದಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಆಟಕ್ಕಲ್ಲದೆ ಬೇರೆ ಯಾವ ಉದ್ದೇಶಕ್ಕೆ ಈ ಜಾಗವನ್ನು ಬಳಸಬೇಕು ಎಂದು ಕೊಂಡಿದ್ದೀರಿ? ಆಟಕ್ಕಾಗಿ ಮಾತ್ರ ಮೈದಾನ ಸೀಮಿತವಾಗಿದ್ದರೆ ಸರ್ಕಾರಕ್ಕೆ ಸಮಸ್ಯೆ ಏನು? ಎಂದು ಪ್ರಶ್ನಿಸಿತಲ್ಲದೆ, ಪ್ರಕರಣದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು. ಆಟಕ್ಕೆ ಹೊರತುಪಡಿಸಿ ಇನ್ಯಾವುದೆ ಉದ್ದೇಶಕ್ಕೆ ಮೈದಾನವನ್ನು ಬಳಸಬಾರದು. ಯಾವುದೇ ಪಕ್ಷಕಾರರು ಬೇರೆ ಯಾವುದೇ ಕಾರಣಕ್ಕೂ ಅಲ್ಲಿಗೆ ಭೇಟಿ ನೀಡುವಂತಿಲ್ಲ. ಯಾವುದೇ ರೀತಿಯ ಅಹಿತಕರ ಘಟನೆಗೆ ಅವಕಾಶ ಮಾಡಿಕೊಡಬಾರದು. ಅರ್ಜಿ ವಿಲೇವಾರಿಯಾದ ನಂತರ ಮೈದಾನವನ್ನು ಅಭಿವೃದ್ಧಿಪಡಿಸಬಹುದು. ಅರ್ಜಿದಾರರಿಗೂ ಇದೇ ರೀತಿಯ ಸೂಚನೆ ನೀಡಲಾಗುವುದು ಎಂದು ಹೈಕೋರ್ಟ್‌ ಮೌಖೀಕವಾಗಿ ಹೇಳಿತು.

ಪಡುಬಿದ್ರಿ : ಆ.29ರಂದು ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆ ಪ್ರಾರಂಭ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago