ಚಾರ್ಜ್ಶೀಟ್ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ ; ಇದು ಒಂದು ಕಾನೂನು ಪ್ರಕ್ರಿಯೆಯಷ್ಟೇ : ಡಿ.ಕೆ. ಸುರೇಶ್ – Vishwanews24
ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ..
ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿರುತ್ತದೆ ..
ಬೆಂಗಳೂರು: ಚಾರ್ಜ್ಶೀಟ್ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆಯಷ್ಟೇ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದರು.
ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಚಾರ್ಜ್ಶೀಟ್ ಸಲ್ಲಿಸಿದೆ. ಈ ಕುರಿತಂತೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ.ಕೆ.ಸುರೇಶ್ ಅವರು, ಚಾರ್ಜ್ಶೀಟ್ ಸಲ್ಲಿಕೆಗೆ ನಾವು ಹೆದರುವ ಅಗತ್ಯವಿಲ್ಲ. ಚಾರ್ಜ್ಶೀಟ್ ಸಲ್ಲಿಕೆ ಒಂದು ಕಾನೂನು ಪ್ರಕ್ರಿಯೆ. ಚಾರ್ಜ್ಶೀಟ್ನಲ್ಲಿ ಏನಿದೆ ಅಂತಾ ನಮಗೂ ಗೊತ್ತಿಲ್ಲ. ನಿಮಗೂ ಗೊತ್ತಿಲ್ಲ. ನಮ್ಮ ವಕೀಲರ ಜೊತೆ ಚರ್ಚಿಸುತ್ತೇವೆ. ಚಾರ್ಜ್ಶೀಟ್ ಕಾಪಿ ನಾಳೆ ಅಥವಾ ಸೋಮವಾರ ಸಿಗಬಹುದು. ಸಿಕ್ಕ ನಂತರ ನಮ್ಮ ಕಾನೂನು ಹೋರಾಟ ಏನು ಎನ್ನುವುದನ್ನು ನಿರ್ಧರಿಸುತ್ತೇವೆ ಎಂದರು.
ರಾಜಕೀಯ ಪ್ರೇರಿತವಾಗಿ ನಮ್ಮ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ನಮ್ಮ ಹೋರಾಟ ನಡೆಯುತ್ತಿರುತ್ತದೆ. ನಾವು ಹೆದರುವ ಪ್ರಶ್ನೆಯೇ ಇಲ್ಲ. ಏನೇ ಷಡ್ಯಂತ್ರ ಮಾಡಿದರೂ ನಾವು ಹೆದರಲ್ಲ. ನಾವು ಮಾನಸಿಕವಾಗಿ, ದೈಹಿಕವಾಗಿ ಎಲ್ಲ ರೀತಿಯಲ್ಲಿ ಪ್ರಕರಣ ಎದುರಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.
ಮಂಗಳೂರು ಮತ್ತೆ ಹಿಜಬ್ ವಿವಾದ : ವಿವಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಂದ ಪ್ರತಿಭಟನೆ – Vishwanews24
