ಚಾರ್ಮಾಡಿ ಘಾಟಿಯಲ್ಲಿ ಮರಬಿದ್ದು ಸಂಚಾರಕ್ಕೆ ಅಡ್ಡಿ: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಆಂಬುಲೆನ್ಸ್ – Vishwanews24
ಚಾರ್ಮಾಡಿ ಘಾಟಿಯಲ್ಲಿ ಮರಬಿದ್ದು ಸಂಚಾರಕ್ಕೆ ಅಡ್ಡಿ: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಆಂಬುಲೆನ್ಸ್
ಬೆಳ್ತಂಗಡಿ: ಮಲೆನಾಡಿನಾದ್ಯಂತ ಭಾರೀ ಮಳೆ ಮುಂದುವರಿದಿದ್ದು, ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಇಂದು ಬೆಳಗ್ಗೆ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನಗಳ ಸಂಚಾರಕ್ಕೆ ಅಡಚಣೆಯುಂಟಾಗಿತ್ತು.
ಈ ವೇಳೆ ಆಂಬುಲೆನ್ಸ್ ವೊಂದು ಕೂಡಾ ಟ್ರಾಫಿಕ್ ಜಾಮ್ ನಲ್ಲಿ ಸುಮಾರು ಒಂದು ಗಂಟೆ ಕಾಲ ಸಿಲುಕಿತ್ತು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಮರವನ್ನು ತೆರವುಗೊಳಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ರವಿವಾರ ಲಾರಿ- ಮತ್ತು ಸರಕಾರಿ ಬಸ್ ನಡುವೆ ಅಪಘಾತ ಸಂಭವಿಸಿದ್ದರಿಂದ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಕೊಲ್ಲೂರು: ಸೌಪರ್ಣಿಕಾ ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತದೇಹ ಪತ್ತೆ – Vishwanews24
