Featured

ಚಾರ್ಮಾಡಿ ಘಾಟ್‌ : ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ , ಘನ ವಾಹನಗಳ ಸಂಚಾರ ನಿಷೇಧ -Vishwanews24

ಮಂಗಳೂರು : ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಲಘುವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಿ ಭಾರೀ ವಾಹನಗಳ ಸಂಚಾರ ನಿಷೇಧ ವಿಸ್ತರಿಸಿ ನವೆಂಬರ್‌ 27ರ ಬುಧವಾರ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ಹೊರಡಿಸಿದ್ದಾರೆ.

ನವೆಂಬರ್‌ 28ರಿಂದ ದಿನದ 24 ಗಂಟೆಗಳಲ್ಲಿಯೂ ಈ ರಸ್ತೆಯಲ್ಲಿ ಲಘ ವಾಹನಗಳಿಗೆ ಸಂಚಾರ ಮಾಡಬಹುದು. ಆದರೆ ಘನ ವಾಹನಗಳಿಗೆ ಸಂಚಾರ ನಿಷೇಧಿಸಲಾಗಿದ್ದು ಈ ಆದೇಶ ಮುಂದಿನ ಆದೇಶದವರೆಗೂ ಜಾರಿಯಲ್ಲಿರುತ್ತದೆ.

ನಿರಂತರವಾಗಿ ಸುರಿದ ಮಳೆಯ ಪರಿಣಾಮದಿಂದಾಗಿ ಚಾರ್ಮಾಡಿ ಘಾಟ್‌ನಲ್ಲಿ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದವು. ಸೆಪ್ಟೆಂಬರ್‌ 15ರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲಪುರಂ ರಸ್ತೆಯ 76ಕಿ.ಮೀ.ನಿಂದ 86ಕಿ.ಮೀವರೆಗಿನ ರಸ್ತೆಯ ಮಾರ್ಗದಲ್ಲಿ ಲಘು ವಾಹನಗಳಿಗೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ನೀಡಿ ಘನ ವಾಹನಗಳ ಸಂಚಾರವನ್ನು ನಿಷೇಧ ಮಾಡಿತ್ತು. ಈ ಆದೇಶವನ್ನು ಮಾರ್ಪಾಡು ಮಾಡಿದ್ದು, ಲಘು ವಾಹನಗಲೀಗೆ ದಿನದ 24 ಗಂಟೆಗಳ ಕಾಲವು ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿ ಘನ ವಾಹನ ಸಂಚಾರಕ್ಕೆ ಹೇರಲಾಗಿದ್ದ ನಿಷೇಧವನ್ನು ಮುಂದುವರಿಸಲಾಗಿದೆ.

ಲಘು ವಾಹನಗಳಾದ ಕಾರು, ಜೀಪು, ವ್ಯಾನ್, ಮಿನಿವ್ಯಾನ್‌, ದ್ವಿಚಕ್ರ ವಾಹನ ಮತ್ತು ಆಂಬುಲೆನ್ಸ್‌ಗಳಿಗೆ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಲ್ಟಿ ಎಕ್ಸೆಲ್‌ ಟ್ರಕ್‌, ಟ್ಯಾಂಕರ್ಸ್, ಲಾಂಗ್ ಚಾಸೀಸ್, ಸಾರ್ವಜನಿಕರು ಸಂಚರಿಸುವ ಬಸ್‌ಗಳು, ಹೆವಿ ಕಮರ್ಷಿಯಲ್‌ ವಾಹನಗಳು, ಶಿಪ್‌ ಕಾರ್ಗೊ ಕಂಟೈನರ್‌, ರಾಜಹಂಸ ಮತ್ತು ಅಧಿಕ ಬಾರದ ಸರಕು ಸಾಗಾಟ ಮಾಡುವ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

 

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

3 hours ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

1 day ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago