ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಇದೀಗ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ ಸಂಭವಿಸಿದ್ದರಿಂದ ಸಂಚಾರ ಸ್ಥಗಿತವಾಗಿದೆ.
ಬೆಳ್ತಂಗಡಿ ತಾಲೂಕಿನ 3 ಮತ್ತು 10ನೇ ತಿರುವಿನಲ್ಲಿ ರಸ್ತೆಗೆ ಮಣ್ಣು ಕುಸಿದು ಬಿದ್ದಿದ್ದು, ರಸ್ತೆ ತುಂಬೆಲ್ಲ ಮಣ್ಣು ಬಿದ್ದಿದೆ. ಮಣ್ಣು ತೆರವು ಕಾರ್ಯಾಚರಣೆ ಚುರುಕುಗೊಂಡಿದ್ದು, ಕಾರ್ಯಾಚರಣೆ ಪೂರ್ಣಗೊಳ್ಳುವವರೆಗೆ ವಾಹನ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜೀವ ನದಿಗಳಿಗೆ ಕಳೆ ಬಂದಿದ್ದು, ತುಂಗಾ-ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಕೊಟ್ಟಿಗೆಹಾರ, ಚಾರ್ಮಾಡಿಯಲ್ಲಿ ಮಳೆಯ ಅಬ್ಬರಕ್ಕೆ ಜನ ಕಂಗಾಲಾಗಿದ್ದಾರೆ. ಚಾರ್ಮಾಡಿಯಲ್ಲಿ ರಸ್ತೆ ಬದಿಯ ಗುಡ್ಡ ಕುಸಿತ ಉಂಟಾಗುತ್ತಿದ್ದು, ಮಳೆ-ಗಾಳಿಗೆ ಮರಗಳು ಧರೆಗುರುಳುತ್ತಿವೆ.
ಇನ್ನೊಂದೆಡೆ ಅರಬ್ಬಿ ಸಮುದ್ರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವುದರಿಂದ ಅಲೆಗಳ ಅಬ್ಬರವೂ ಜೋರಾಗಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…