ಬೆಳ್ತಂಗಡಿ: ಕಳೆದ ಎರಡು ದಿನಗಳಿಂದ ಚಾರ್ಮಾಡಿ ಘಾಟ್ ಸುತ್ತಮುತ್ತ ಧಾರಾಕಾರ ಮಳೆಯಾಗಿ ಘಾಟ್ ರಸ್ತೆಯಲ್ಲಿ ಅಲ್ಲಲ್ಲಿ ಕುಸಿತ ಕಂಡಿರುವುದರಿಂದ 2 ದಿನಗಳ ಕಾಲ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಮಾಡಿದ್ದಾರೆ.
ರಸ್ತೆಗೆ ಕುಸಿದು ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಇನ್ನು ಕರಾವಳಿ ಕಡೆಗೆ ಸಂಚರಿಸುವ ವಾಹನಗಳನ್ನು ಕೊಟ್ಟಿಗೆಹಾರದಲ್ಲಿ ತಡೆಯಲಾಗಿದ್ದು ಬದಲಿ ಮಾರ್ಗದಲ್ಲಿ ವಾಹನ ಸಂಚರಿಸುತ್ತಿದೆ.
ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕೈದು ಕಡೆಗಳಲ್ಲಿ ಗುಡ್ಡ ಕುಸಿದಿದ್ದು, ಭಾರೀ ಪ್ರಮಾಣದಲ್ಲಿ ಮಣ್ಣು ರಸ್ತೆಯ ಮೇಲೆ ಬಿದ್ದಿದೆ. ಹೀಗಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಬಂದ್ ಆಗಿದೆ.
ವಿಷಯ ತಿಳಿದ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಬೆಳ್ತಂಗಡಿ ತಹಸೀಲ್ದಾರ್ ಗಣಪತಿ ಶಾಸ್ತ್ರೀ, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ., ಎಸ್ ಐ ಅವಿನಾಶ್, ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ಮಂಗಳವಾರ ಮಧ್ಯರಾತ್ರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…