ಉತ್ತರಾಖಂಡ : ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದ ಶಾಲಾ ವಾಹನ ,ಪರಿಣಾಮ ಸ್ಥಳದಲ್ಲಿಯೇ 9 ಮಕ್ಕಳು ದುರ್ಮರಣಕ್ಕೀಡಾಗಿ, ಇತರೆ ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ, ಉತ್ತರಾಖಂಡ್ ನ ಕಂಗ್ಸಾಲಿ ಬಳಿಯ ತೆಹ್ರಿ ಗ್ರಹವಾಲ್ ಬಳಿ ನಡೆಸಿದೆ.
ಶಾಲಾ ವಾಹನದಲ್ಲಿ ಒಟ್ಟು 18 ಮಕ್ಕಳು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ರಸ್ತೆಯಲ್ಲಿ ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಉರುಳಿದೆ. ಸ್ಥಳದಲ್ಲೇ 9 ಮಕ್ಕಳು ಸಾವಿಗೀಡಾಗಿದ್ದು, ಉಳಿದವರು ಗಾಯಗೊಂಡಿದ್ದಾರೆ.
ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಗರ್ವಾಲ್ನ ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಅಜಯ್ ರೌಟೇಲಾ 9 ಮಕ್ಕಳು ಮೃತರಾಗಿವ ಮಾಹಿತಿಯನ್ನು ಖಚಿತಪಡಿಸಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಗರ್ವಾಲ್ ನ ಐಜಿಪಿ ಅಜಯ್ ರೌಟೇಲಾ, ಶಾಲಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 9 ಮಕ್ಕಳು ಮೃತರಾಗಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ತಂಡ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಗಾಯಗೊಂಡಿರುವ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…