ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ – vishwanews24
ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಒಟ್ಟು ನಾಲ್ವರು ಪ್ರಯಾಣಿಕರ ಪೈಕಿ ಕಾರು ಮಾಲೀಕ ಫಯಾಜ್ ಸಾವು, ನಯಾಜ್ ರಕ್ಷಣೆ ಮಾಡಲಾಗಿದ್ದು, ಅಸ್ಲಂಪಾಷಾ, ಪೀರ್ಖಾನ್ಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂ ನಿವಾಸಿಗಳು. ಘಟನಾ ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ. ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆ ಕಾರು ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಶಿವಳ್ಳಿ ಠಾಣೆ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು, ಅಪಾರ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿದೆ. ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.
ಇನ್ನು ತಡೆಗೋಡೆ ಇಲ್ಲದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿಸಿ ನಾಲೆಗೆ ಕಾರು, ಬಸ್ ಬೀಳ್ಳುತ್ತಿವೆ. ಹೀಗಿದ್ದರೂ ತಡೆಗೋಡೆ ಮಾತ್ರ ಹಾಕುತ್ತಿಲ್ಲ. ಜನರ ಪ್ರಾಣಕ್ಕೆ ಇವರ ಬಳಿ ಬೆಲೆ ಇಲ್ಲ ಎಂದು ಸರ್ಕಾರಕ್ಕೆ ಜನರು ಇಡಿ ಶಾಪ ಹಾಕುತ್ತಿದ್ದಾರೆ.
