Featured

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ – vishwanews24

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಒಟ್ಟು ನಾಲ್ವರು ಪ್ರಯಾಣಿಕರ ಪೈಕಿ ಕಾರು ಮಾಲೀಕ ಫಯಾಜ್ ಸಾವು, ನಯಾಜ್ ರಕ್ಷಣೆ ಮಾಡಲಾಗಿದ್ದು, ಅಸ್ಲಂಪಾಷಾ, ಪೀರ್​ಖಾನ್​ಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಮಂಡ್ಯದ ಹಾಲಹಳ್ಳಿ ಸ್ಲಂ ನಿವಾಸಿಗಳು. ಘಟನಾ ಸ್ಥಳಕ್ಕೆ ಮಂಡ್ಯ ಡಿಸಿ ಡಾ.ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಪಾಂಡವಪುರದಿಂದ ಮಂಡ್ಯಕ್ಕೆ ಬರುವ ವೇಳೆ ಅವಘಡ ಸಂಭವಿಸಿದೆ. ವಿಸಿ ನಾಲೆಗೆ ತಡೆಗೋಡೆ ಇಲ್ಲದ ಹಿನ್ನೆಲೆ ಕಾರು ಬಿದ್ದಿದೆ ಎನ್ನಲಾಗುತ್ತಿದೆ. ಸದ್ಯ ಶಿವಳ್ಳಿ ಠಾಣೆ ಪೊಲೀಸರಿಂದ ಕಾರ್ಯಾಚರಣೆ ನಡೆದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದಿದ್ದು, ಅಪಾರ ಪ್ರಮಾಣದಲ್ಲಿ ನೀರು‌ ಹರಿಯುತ್ತಿದೆ. ನೀರಿನ ರಭಸಕ್ಕೆ ಕಾರು ಮುಳುಗಡೆಯಾಗಿದೆ. ಅಪಾರ ನೀರು ಇರುವ ಕಾರಣ ಕಾರ್ಯಾಚರಣೆಗೆ ಅಡ್ಡಿ ಉಂಟಾಗುತ್ತಿದೆ.

ಇನ್ನು ತಡೆಗೋಡೆ ಇಲ್ಲದ ಕಾರಣ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ವಿಸಿ ನಾಲೆಗೆ ಕಾರು, ಬಸ್ ಬೀಳ್ಳುತ್ತಿವೆ. ಹೀಗಿದ್ದರೂ ತಡೆಗೋಡೆ ಮಾತ್ರ ಹಾಕುತ್ತಿಲ್ಲ. ಜನರ ಪ್ರಾಣಕ್ಕೆ ಇವರ ಬಳಿ ಬೆಲೆ ಇಲ್ಲ ಎಂದು ಸರ್ಕಾರಕ್ಕೆ ಜನರು ಇಡಿ ಶಾಪ ಹಾಕುತ್ತಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

11 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago