ಚಾಲೆಂಜಿಂಗ್ ಸ್ಟಾರ್ ಕಾರು ಅಪಘಾತ : ದರ್ಶನ್ ಮುಂಗೈ ಮುರಿತ
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್, ಹಿರಿಯ ನಟ ದೇವರಾಜ್, ಪ್ರಜ್ವಲ್ ದೇವರಾಜ್ ಅವರಿದ್ದ ಕಾರು ಅಪಘಾತ ನಡೆದ ಪ್ರಕರಣ ಸೋಮವಾರ ಮುಂಜಾನೆ 3 ಗಂಟೆ ಸುಮಾರಿಗೆ ನಡೆದಿದೆ. ದರ್ಶನ್ ಕೈ ಗೆ ಗಂಭೀರ ಗಾಯವಾಗಿದ್ದು, ದರ್ಶನ್ ಮತ್ತು ಪ್ರಜ್ವಲ್ ದೇವರಾಜ್ ಸಣ್ಣಪುಟ್ಟ ಗಾಯವಾಗಿದ್ದು ಮೈಸೂರಿನ ಏಷಿಯಾ ಕೊಲಂಬಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ಮೈಸೂರಿನಲ್ಲಿ ಪ್ರಾಣಿಗಳ ದತ್ತು ಪಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೂವರು ನಟರು ಕಾರಿನಲ್ಲಿ ಬೆಂಗಳೂರಿಗೆ ಮರಳುವ ಸಂದರ್ಭ ಮೈಸೂರು ಹಿನಕಲ್ ರಸ್ತೆಯ ಬಳಿ ಸ್ಕಿಡ್ ಆಗಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ ಎನ್ನಲಾಗಿದೆ.
ದರ್ಶನ ಬಲಗೈ ಮೂಳೆ ಮುರಿತವಾಗಿದ್ದು, ಶಸ್ತ್ರ ಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಾಗಿದೆ.
ದರ್ಶನ್ ಮೈಸೂರಿನ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ. ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಘಟನೆ ನಡೆದಿದೆ.
ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ಹಾಗೂ ಅವರ ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿದೆ ಎಂದು ವರದಿಗಳು ತಿಳಿಸಿವೆ.
ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ನಟ ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಏಟಾಗಿದೆ. ಅವರನ್ನೂ ಕೂಡ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸುದ್ದಿ ತಿಳಿದು ಸಾಕಷ್ಟು ಅಭಿಮಾನಿಗಳು ಆಗಮಿಸಿದ್ದು, ಆಸ್ಪತ್ರೆ ಸುತ್ತ ಪೊಲೀಸರು ಬಿಗು ಭದ್ರತೆ ಒದಗಿಸಿದ್ದಾರೆ.
ಜಾಹಿರಾತು
