ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ : ನಾಲ್ಕು ವರ್ಷದ ಬಾಲಕಿ ದುರ್ಮರಣ -vishwanews24
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ
ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ದುರ್ಘಟನೆ ಗುಂಡ್ಲುಪೇಟೆ ತಾಲೂಕಿನ ಕಲ್ಲಿಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪುಟ್ಟಮ್ಮ ಮತ್ತು ಆನಂದ ದಂಪತಿಯ ನಾಲ್ಕು ವರ್ಷದ ಪುತ್ರಿ ಮೃತಪಟ್ಟ ಬಾಲಕಿ. ಮನೆಯಲ್ಲಿ ತಾಯಿ ಗ್ರೈಂಡರ್ ಬಳಸುತ್ತಿದ್ದ ವೇಳೆ ಬಾಲಕಿ ಅದನ್ನು ಮುಟ್ಟಿದ್ದಾಳೆ. ಈ ವೇಳೆ ಗ್ರೈಂಡರ್‌ಗೆ ವಿದ್ಯುತ್ ಪ್ರವಹಿಸಿದ್ದು, ಬಾಲಕಿಗೆ ತೀವ್ರ ಶಾಕ್ ಹೊಡೆದಿದೆ.
ಅಸ್ವಸ್ಥಗೊಂಡ ಬಾಲಕಿಯನ್ನು ಪೋಷಕರು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
